
ಬೆಳಗಾವಿ: ದಿ ಯುನೈಟೆಡ್ ಗೋವನ್ಸ್ ರಿಕ್ರಿಯೆಷನ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಇಂಟರ್ ಹೈಸ್ಕೂಲ್ ಚೆಸ್ ಟೂರ್ನಮೆಂಟ್‌ನಲ್ಲಿ ಗುರುವಾರ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಟೂರ್ನಮೆಂಟಿನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು:
- ಕವಿತಾ ರವಿ ಮಡಿವಾಳ
- ರಮ್ಯಾ ಗಣೇಶ್ ಲಂಬಾಣಿ
- ಪೂರ್ಣಿಮಾ ಚೌಡಿ
- ವಿವೇಕ್ ಗುಡಸಿ

ಜಿಲ್ಲೆಯ ವಿವಿಧ ಶಾಲೆಗಳಿಂದ ಒಟ್ಟು 35 ವಿದ್ಯಾರ್ಥಿಗಳು ಈ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇವರ ನಡುವೆ ಅಂಧ ವಿದ್ಯಾರ್ಥಿಗಳಾದ ಈ ನಾಲ್ವರು ಸ್ಪರ್ಧಿಗಳು ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ಸರ್ಟಿಫಿಕೇಟ್ ಹಾಗೂ ಟ್ರೋಫಿಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದವರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುರೇಶ್ ಮಾದಿಗರ.

ಈ ಸಾಧನೆಯ ಹಿನ್ನೆಲೆಯಲ್ಲಿ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯ ಎಲ್ಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ಸಂಸ್ಥೆಯ ಅಧ್ಯಕ್ಷರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಗಾವಡೆ ಅವರು ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143





















