ಬೆಂಗಳೂರು: ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿ ಪ್ರತಿಷ್ಠಿತ ಕಾಲೇಜುಗಳ ವಿರುದ್ಧ ಶಂಕೆ ವ್ಯಕ್ತವಾಗಿದ್ದು, Enforcement Directorate (ಇಡಿ) ಅಧಿಕಾರಿಗಳು ಗುರುವಾರ ಬೆಳಗ್ಗೆ ಬೆಳಗ್ಗೆ ಬೆಂಗಳೂರಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಮೆಜೆಸ್ಟಿಕ್, ಬಸವನಗುಡಿ, ಜಯನಗರ, ಮತ್ತು ಮತ್ತಿತರ ಪ್ರದೇಶಗಳಲ್ಲಿ ಈ ದಾಳಿಗಳು ನಡೆದಿದ್ದು, ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಕನಿಷ್ಠ 18 ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಈ ದಾಳಿಗಳು ಕಾಲೇಜುಗಳಲ್ಲಿ ಸೀಟುಗಳನ್ನು ಕಾನೂನು ಬಾಹಿರ ರೀತಿಯಲ್ಲಿ ಕಾಯ್ದಿರಿಸಿ ಅವುಗಳನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡಲಾಗುತ್ತಿದ್ದ ಎಂಬ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿದೆ. ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಹಣಕಾಸು ಲೆಕ್ಕಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಇನ್ನೂ ಅಧಿಕೃತ ಮಾಹಿತಿ ನಿರೀಕ್ಷೆಯಲ್ಲಿದ್ದು, ಇಡಿ ತನಿಖೆ ಮುಂದುವರಿದಿದೆ. ಹಗರಣದ ಹಿನ್ನೆಲೆಯಲ್ಲಿ ಇತರ ಕಾಲೇಜುಗಳ ಮೇಲೂ ನಿಗಾ ಇಡಲಾಗಿದೆ.
ಇನ್ನು ಮುಂದೆ…
ಇಂಜಿನಿಯರಿಂಗ್ ಸೀಟ್ ಹಗರಣವು ರಾಜ್ಯದ ಶಿಕ್ಷಣ ಕ್ಷೇತ್ರದ ನೈತಿಕತೆಗೆ ಧಕ್ಕೆ ಉಂಟುಮಾಡಿದ್ದು, ಪ್ರಕರಣದ ಕುರಿತು ಅಧಿಕಾರಿಗಳು ಸತ್ಯಾಂಶವನ್ನು ಬಹಿರಂಗಪಡಿಸುವ ನಿರೀಕ್ಷೆಯಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 95905 51177