ಬೆಳಗಾವಿ ಸೆ.೨೬ (ಕರ್ನಾಟಕ ವಾರ್ತೆ): ಮಹಾತ್ಮಾ ಗಾಂಧೀಜಿ ೧೫೫ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಇತ್ತೀಚಿಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮಾ ಗಾಂಧೀಜಿಯವರ ಬದುಕು, ಸ್ವಾತಂತ್ರö್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃರ್ಶಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳ ಕುರಿತು ಪ್ರೌಢಶಾಲೆ, ಪದವಿಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತ್ತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ೩ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಜರುಗಿದ ಪ್ರಬಂಧ ಸ್ಪರ್ಧೆಯ ವಿಜೇತರ ವಿವರ ಇಂತಿದೆ.
ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಚ್ಛೆ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕು.ದಿವ್ಯಾ ಶ್ರೀಶೈಲ ಗಾಣಿಗೇರ, ದ್ವೀತಿಯ ಸ್ಥಾನ ಸುರೇಬಾನ ಗುರುದೇವ ಆತ್ಮಾನಂದ ಬಾಲಕಿಯರ ಪ್ರೌಢಶಾಲೆಯ ಗಾಯತ್ರಿ ಮ ಮಲ್ಲಾಡಿ, ತೃತೀಯ ಸ್ಥಾನ ಖಡಕಲಾಟ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ವಿದ್ಯಾರ್ಥಿನಿ ಅಪೂರ್ವ ಉಮೇಶ ಹೊರಟ್ಟಿ ಪಡೆದಿರುತ್ತಾರೆ.
ಪದವಿಪೂರ್ವ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಯರಗಟ್ಟಿ ಎಸ್.ಬಿ.ಜೆ. ಸರ್ಕಾರಿ ಪಿಯು ಕಾಲೇಜಿನ ಲಕ್ಷಿö ಕಾಸರ, ದ್ವೀತಿಯ ಸ್ಥಾನ ಸವದತ್ತಿ ಎಸ್.ಕೆ.ಪಿ.ಯು ಕಾಲೇಜು ವಿದ್ಯಾರ್ಥಿ ಎಸ್.ಎಮ್.ಸವದತ್ತಿ, ತೃತೀಯ ಸ್ಥಾನ ಮಜಲಟ್ಟಿ ಸರ್ಕಾರಿ ಪಿ.ಯು. ಕಾಲೇಜಿನ ಸಹನಾ ಎಲ್. ಕರಿಶೆಟ್ಟಿ ಹಾಗೂ ನಿಪ್ಪಾಣಿಯ ಕೆ.ಎಲ್.ಇ.ಜಿ.ಆಯ್, ಬಾಗೇವಾಡಿ ಪಿಯು ಕಾಲೇಜಿನ ಪ್ರಣಿತ ಪಿ ಕಮತೆ ಪಡೆದಿರುತ್ತಾರೆ.
ಪದವಿ/ಸ್ನಾತ್ತಕೋತ್ತರ ಪದವಿ ವಿಭಾಗದಲ್ಲಿ: ಯಮಕನಮರಡಿ ವೈ.ವಿ.ಎಸ್.ಪದವಿ ಕಾಲೇಜು ವಿದ್ಯಾರ್ಥಿನಿ ಋತಿಕಾ ಅಲಾಡಲಿ, ದ್ವೀತಿಯ ಸ್ಥಾನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಾಜ ಶಾಸ್ತç ವಿಭಾಗದ ಶ್ರವಣ ಸನದಿ, ತೃತೀಯ ಸ್ಥಾನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಾಜ ಶಾಸ್ತç ವಿಭಾಗದ ರೋಹಿತ ಅವಟಿ ಪಡೆದಿರುತ್ತಾರೆ.
ಪ್ರಬಂಧ ಸ್ಪರ್ಧೆ ವಿಜೇತರುಗಳಿಗೆ ಅಕ್ಟೋಬರ ೨ ರಂದು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಬೆಳಗಾವಿ ನಗರದ ಟಿಳಕವಾಡಿಯ ವೀರಸೌಧದಲ್ಲಿ ಜರುಗಲಿರುವ ಮಹಾತ್ಮಾ ಗಾಂಧೀಜಿಯವರ ೧೫೫ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ಹಾಗೂ ಬಹುಮಾನವನ್ನು ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದೆ.