ಬೆಳಗಾವಿ ಪೋಕ್ಸೋ ನ್ಯಾಯಾಲಯದ ತೀರ್ಪು ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಶಿಕ್ಷ
ಬೆಳಗಾವಿ: ನಗರದ ಜಿಲ್ಲಾ ನ್ಯಾಯಾಲಯ ಗುರುವಾರ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಹೌದು, ನಿಪ್ಪಾಣಿ ಗ್ರಾಮೀಣ ಪೋಲಿಸ ಠಾಣೆಯಲ್ಲಿ ಕಲಂ.366 376 (1) (2) (ಐ) ಐಪಿಸಿ ಮತ್ತು ಕಲಂ. 4, 6, ರ ಪೋಕ್ಸೋ ಕಾಯ್ದೆಯಡಿಯಲ್ಲಿ, ಪ್ರಕರಣವೊಂದು ದಾಖಲಾಗಿತ್ತು.
ಈ ಬಗ್ಗೆ ತನಿಖಾಧಿಕಾರಿ ಕಿಶೂರ ಭರಣಿ ಅವರು ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯ-01 ಬೆಳಗಾವಿ ನ್ಯಾಯಾಲಯಕ್ಕೆ ದೋಷಾರೋಪಣಿ ಪಟ್ಟಿಯನ್ನು ಸಲ್ಲಿಸಿದ್ದರು.
ಆರೋಪಿ ಚಿಕ್ಕೋಡಿಯ ಕುರ್ಲಿಯ ನಿವಾಸಿ ಶ್ರೀಸಂಗಮ್ಮ ಕೆ ನಿಕಾಡೆ ಎಂಬಾತ, ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯನ್ನ ಮದುವೆಯಾಗುವುದಾಗಿ ಪುಸಲಾಯಿಸಿ ಅಪಹರಣ ಮಾಡಿಕೊಂಡು ಕೊಲ್ಲಾಪುರ- ಪೂನಾ ನಂತರ ಕೊಲ್ಲಾಪುರದ ಕರವೀರ ತಾಲ್ಲೂಕಿನ ಆಡೂರ ಗ್ರಾಮಕ್ಕೆ ಕರೆದೊಯ್ದು ಅಲ್ಲಿ ಬಾಡಿಗೆ ಮನೆ ಪಡೆದು ಪತಿ-ಪತ್ನಿಯೆಂದು ಮಾಲೀಕರಿಗೆ ನಂಬಿಸಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ವಿಚಾರ ವಿಚಾರಣೆ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.
ನ್ಯಾಯಾಲಯದಲ್ಲಿ 5 ದಾಖಲೆಗಳು ಹಾಗೂ 15 ಸಾಕ್ಷಿಗಳ ಅಡಿಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಮತಿ ಸಿ.ಎಂ ಪುಷ್ಪಲತಾ ಅವರು, ಆರೋಪಿತನಿಗೆ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000/- ರೂಪಾಯಿ ದಂಡ ವಿಧಿಸಿ ಪ್ರಕರಣದ ತೀರ್ಪುನ್ನ ನೀಡಿದ್ದಾರೆ.
ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂ. ಒಂದು ಲಕ್ಷ ಪರಿಹಾರ ಧನವನ್ನ ಪಡೆಯಲು ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಲ್. ವಿ ಪಾಟೀಲ ವಾದ ಮಂಡಿಸಿದರು.