ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪೂರ ಗ್ರಾಮದ, ಕುಮಾರಿ ರೂಪಾ ಚನಗೌಡ ಪಾಟೀಲ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ವಿದ್ಯಾರ್ಥಿನಿ ಕುಮಾರಿ ರೂಪಾ ಪಾಟೀಲ ಸಾಧನೆಗೆ ಕಿತ್ತೂರು ತಾಲೂಕ ಪ್ರೌಢ ಶಾಲಾ ಶಿಕ್ಷಕರ ಸಂಘದ ಹಾಗೂ ಸಮಸ್ತ ಶಿಕ್ಷಕರು, ಗ್ರಾಮಸ್ಥರು, ಕುಟುಂಬಸ್ಥರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ರಾಜ್ಯ ಹಾಗೂ ಜಿಲ್ಲೆಯ ಹೆಸರು ಬೆಳಗಿಸಿದ ಕುಮಾರಿ ರೂಪಾ ಚನಗೌಡ ಪಾಟೀಲ ಇವಳಿಗೆ ನಮ್ಮೂರ ಧ್ವನಿ ಸುದ್ದಿ ವಾಹಿನಿಯ ವತಿಯಿಂದ ತುಂಬು ಹೃದಯದ ಅಭಿನಂದನೆಗಳು.💐💐