ಬೆಳಗಾವಿ: ಜಿಲ್ಲೆಯ ಗೋಕಾಕ್‌ನಲ್ಲಿ ನಡೆಯುತ್ತಿರುವ ಲಕ್ಷ್ಮೀದೇವಿ ಜಾತ್ರೆಯ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಸಹಾಯಕ ಉಪನಿರೀಕ್ಷಕ (ASI) ಒಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತ ಅಧಿಕಾರಿಯನ್ನು ಹುಬ್ಬಳ್ಳಿಯ ಎಪಿಎಂಸಿ ಠಾಣೆಯ ಎ.ಎಸ್.ಐ ಎಲ್.ಜಿ. ಮೀರಾನಾಯಕ್ (56) ಎಂದು ಗುರುತಿಸಲಾಗಿದೆ. ಲಕ್ಷ್ಮೀದೇವಿ ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅವರನ್ನು ಗೋಕಾಕ್‌ಗೆ ನಿಯೋಜಿಸಲಾಗಿತ್ತು.
ಲಭ್ಯ ಮಾಹಿತಿ ಪ್ರಕಾರ, ಗೋಕಾಕ್‌ನ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೀರಾನಾಯಕ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅವರ ಮೃತದೇಹವನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಕರ್ತವ್ಯನಿರತ ಅಧಿಕಾರಿಯ ಅಕಾಲಿಕ ನಿಧನವು ಪೊಲೀಸ್ ಇಲಾಖೆಯಲ್ಲಿ ಮತ್ತು ಸ್ಥಳೀಯರಲ್ಲಿ ದುಃಖವನ್ನುಂಟು ಮಾಡಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143