ಬೆಳಗಾವಿ: ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆಯಿಂದ ಸಾರ್ವಜನಿಕ ಜೀವನಕ್ಕೆ ತೊಂದರೆ ಉಂಟಾಗಿದ್ದು, ಮುಂಗಾರು ಮಳೆ ಚುರುಕು ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ.
ಮಳೆ ಪರಿಣಾಮವಾಗಿ ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜೂನ್ 25, ಬುಧವಾರದಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಬೈಲಹೊಂಗಲ, ಖಾನಾಪುರ, ಕಿತ್ತೂರು ಹಾಗೂ ಗೋಕಾಕ ಭಾಗಗಳಲ್ಲಿ ಭತ್ತದ ಗದ್ದೆಗಳು ಜಲಾವೃತವಾಗಿವೆ. ಮಲಪ್ರಭಾ ನದಿಯ ಒಳಹರಿವು ಹಾಗೂ ಘಟಪ್ರಭಾ ನದಿಯ ನೀರಿನ ಮಟ್ಟವೂ ಏರಿಕೆಯಾಗುತ್ತಿದೆ. ಇದು ಕೃಷಿಕರ ಮುಖದಲ್ಲಿ ಹಾಸುಮುಖತೆ ಮೂಡಿಸಿದೆ.
ಆದರೆ ನಗರ ಪ್ರದೇಶದಲ್ಲಿ ಮಳೆ ಭಾರೀ ತೊಂದರೆಯನ್ನೂಂಟುಮಾಡಿದ್ದು, ರಸ್ತೆಗಳು ನೀರಿನಲ್ಲಿ ಮುಳುಗಿದ್ದು, ಸಂಚಾರ ಅಡಚಣೆಗೊಳಗಾಗಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆಗೆ ಗುರಿಯಾಗುತ್ತಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ಈ ತಾತ್ಕಾಲಿಕ ರಜೆಯನ್ನು ಘೋಷಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹವಾಮಾನ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತದಿಂದ ತಿಳಿಸಲಾಗಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 95905 51177