Live Stream

[ytplayer id=’22727′]

| Latest Version 8.0.1 |

Local NewsState News

BIG NEWS: ಎರಡು ಬಾರಿ ಗುಣಮಟ್ಟ ಪರಿಶೀಲಿಸಿದ ನಂತರವೇ ಸರ್ಕಾರಿ ಆಸ್ಪತ್ರೆಗೆ ಔಷಧಗಳ ಪೂರೈಕೆ

BIG NEWS: ಎರಡು ಬಾರಿ ಗುಣಮಟ್ಟ ಪರಿಶೀಲಿಸಿದ ನಂತರವೇ ಸರ್ಕಾರಿ ಆಸ್ಪತ್ರೆಗೆ ಔಷಧಗಳ ಪೂರೈಕೆ

 

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನ ಪರಿಷತ್‌ ನಲ್ಲಿ ಬಿಜೆಪಿ ಸದಸ್ಯ ಡಾ. ತಳವಾರ್ ಸಾಬಣ್ಣ ಮತ್ತು ಸಿ.ಟಿ. ರವಿ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಎರಡು ಬಾರಿ ಟೆಸ್ಟ್ ಮಾಡಿ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲಾಗುವುದು. ಜೊತೆಗೆ ಎರಡು-ಮೂರು ವರ್ಷಕ್ಕೆ ಒಂದು ಬಾರಿ ಔಷಧ ತಯಾರಿಕೆ ಕಂಪನಿಗೆ ಖುದ್ದಾಗಿ ತೆರಳಿ ತಪಾಸಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅಗತ್ಯ ಮತ್ತು ಇತರೆ ಔಷಧಗಳ ಸಂಖ್ಯೆಯನ್ನು 732 ರಿಂದ 1084ಕ್ಕೆ ಹೆಚ್ಚಳ ಮಾಡಲಾಗಿದೆ. ಕೆಲವು ಜೀವ ರಕ್ಷಕ ಔಷಧಗಳನ್ನು ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಪೂರೈಸಬೇಕಿರುವುದರಿಂದ ಟೆಂಡರ್ ಪ್ರಕ್ರಿಯೆಯಲ್ಲಿ ಹೆಚ್ಚು ಬಿಡ್ ದಾರರು ಭಾಗಿಯಾಗಿಲ್ಲ. ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ಔಷಧಗಳನ್ನು ತಮ್ಮ ಮಟ್ಟದಲ್ಲಿ ಸೂಕ್ತ ಪ್ರಾಧಿಕಾರದ ಅನುಮೋದನೆಯೊಂದಿಗೆ ಖರೀದಿಸಿ ಸಾರ್ವಜನಿಕರಿಗೆ ವಿತರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";