ವಿಜಯಪುರ : ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಬಸ್ಸಿನಲ್ಲಿದ್ದ ಓರ್ವ ಸಾನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮನಗೂಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.