ಬೆಂಗಳೂರು: ಈಗಾಗಲೇ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ( SSLC and PUC Exam-1 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಅದರಲ್ಲಿ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.
ಇನ್ನೂ ದಿನಾಂಕ 10-01-2025ರ ಇಂದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿ, ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.