Live Stream

[ytplayer id=’22727′]

| Latest Version 8.0.1 |

International NewsNational News

Breaking News: ಭಾರತದಲ್ಲಿ ಪಾಕಿಸ್ತಾನದ 16 ‘ಯೂಟ್ಯೂಬ್ ಚಾನೆಲ್ ‘ಗಳು ನಿಷೇಧಿಸಿದ ಕೇಂದ್ರ ಗೃಹ ಇಲಾಖೆ

Breaking News: ಭಾರತದಲ್ಲಿ ಪಾಕಿಸ್ತಾನದ 16 ‘ಯೂಟ್ಯೂಬ್ ಚಾನೆಲ್ ‘ಗಳು ನಿಷೇಧಿಸಿದ ಕೇಂದ್ರ ಗೃಹ ಇಲಾಖೆ

ವದೆಹಲಿ: ಕೇಂದ್ರ ಗೃಹ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳನ್ನು ಬಂದ್ ಮಾಡಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದ ಉದ್ದೇಶಕ್ಕೆ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಯಾಮ್ ಭಯೋತ್ಪಾದಕ ಘಟನೆಯ ಹಿನ್ನೆಲೆಯಲ್ಲಿ ಭಾರತ, ಅದರ ಸೇನೆ ಮತ್ತು ಭದ್ರತಾ ಸಂಸ್ಥೆಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯ, ಸುಳ್ಳು ಮತ್ತು ದಾರಿತಪ್ಪಿಸುವ ನಿರೂಪಣೆಗಳು ಮತ್ತು ತಪ್ಪು ಮಾಹಿತಿಯನ್ನು ಪ್ರಸಾರ ಮಾಡಿದ್ದಕ್ಕಾಗಿ ಭಾರತ ಸರ್ಕಾರವು 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ನಿಷೇಧಿಸಿದೆ.

https://x.com/ANI/status/1916713470034153654?ref_src=twsrc%5Etfw%7Ctwcamp%5Etweetembed%7Ctwterm%5E1916713470034153654%7Ctwgr%5E2723c885973fde72cbdf08380ef99da2986ff3b3%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadadunia-epaper-dh29e00a9127c54509981c2950cc20f885%2Fbreakingpaakistaanadha16yutyubchaanelgalunishedhakendragruhailaakheyindhamahatvadhaaadesha-newsid-n662078256

ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಯೂಟ್ಯೂಬ್ ಚಾನೆಲ್ಗಳನ್ನು ನಿಷೇಧಿಸಲಾಗಿದೆ.

ನಿಷೇಧಿತ ಪ್ಲಾಟ್ಸಾರ್ಮ್ಯಳಲ್ಲಿ ಡಾನ್, ಸಮಾ ಟಿವಿ, ಎಆರ್ವೈ ನ್ಯೂಸ್, ಬೋಲ್ ನ್ಯೂಸ್, ರಾಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಸುದ್ದಿ ಸಂಸ್ಥೆಗಳ ಯೂಟ್ಯೂಬ್ ಚಾನೆಲ್ಗಳು ಸೇರಿವೆ. ಪತ್ರಕರ್ತರಾದ ಇರ್ಷಾದ್ ಭಟ್ಟಿ, ಅಸ್ಮಾ ಶಿರಾಜಿ, ಉಮರ್ ಚೀಮಾ ಮತ್ತು ಮುನೀಬ್ ಫಾರೂಕ್ ಅವರ ಯೂಟ್ಯೂಬ್ ಚಾನೆಲ್ಗಳನ್ನು ಸಹ ನಿಷೇಧಿಸಲಾಗಿದೆ. ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್ ಮತ್ತು ರಝಿ ನಾಮಾ ಸೇರಿದಂತೆ ಇನ್ನಿತರ ಹ್ಯಾಂಡಲ್ಗಳನ್ನು ನಿಷೇಧಿಸಲಾಗಿದೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";