Live Stream

[ytplayer id=’22727′]

| Latest Version 8.0.1 |

Local NewsState News

Breaking: ಬೆಳಗಾವಿಯ ರಾಜಶೇಖರ ತಳವಾರ ಸೇರಿ ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

Breaking: ಬೆಳಗಾವಿಯ ರಾಜಶೇಖರ ತಳವಾರ ಸೇರಿ ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

 

ಬೆಳಗಾವಿ: ರಾಜಶೇಖರ ತಳವಾರ ಸೇರಿ ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲಾಗಿದೆ. ವಾಲ್ಮೀಕಿ ಸಮುದಾಯದ ಏಳ್ಗೆಗೆ ಶ್ರಮಿಸಿದ ಐವರಿಗೆ ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರಧಾನ.

2024 ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಸೇವೆಗೈದ ಐವರು ಸಾಧಕರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ.

2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನ ಆಯ್ಕೆ ಮಾಡಲು ಶ್ರೀ ಕೆ. ಹೆಚ್.‌ಮ್ಲಲೇಶಪ್ಪ, ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನೇತೃತ್ವದಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರು ಗಣ್ಯರನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಬೆಂಗಳೂರು ವಿಭಾಗದಿಂದ ಶ್ರೀ ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ
ಗಡ್ಡದಾರಹಟ್ಟಿ

ಚಳ್ಳಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆಯವರಾದ ಇವರು ಕಿಲಾರಿ ( ಜಾನುವಾರುಗಳ ಸಂರಕ್ಷಣೆ) ವೃತ್ತಿಯ ಮೂಲಕ ಸಮಾಜದ ಒಳಿತಿಗಾಗಿ ಸಲ್ಲಿಸಿದ್ದಾರೆ. ದೇವರ ಎತ್ತುಗಳ ರಕ್ಷಣೆ, ಜಾನುವಾರುಗಳ ಪೋಷಣೆ, ಸ್ಥಳೀಯ ಬುಡಕಟ್ಟು ಸಮುದಾಯದ ಸಂಸ್ಕೃತಿಯ ಸಂರಕ್ಷಣೆ, ಜಾನುವಾರುಗಳ ಮಹತ್ವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, ಬುಡಕಟ್ಟು ಸಂಸ್ಕೃತಿಯ ಆಚರಣೆಯ ಮೂಲಕ ಜಾನುವಾರುಗಳ ಸಂತತಿಯ ಸಂರಕ್ಷಣೆ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮೀಣ ಸೊಗಡ ಉಳಿಸಿ ಬೆಳೆಸಲು ಶ್ರಮಿಸುತ್ತಿದ್ದಾರೆ. ಇವರ ಅನುಪಮ ಸಮಾಜ ಸೇವೆಯನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೈಸೂರು ವಿಭಾಗದಿಂದ ಡಾ. ರತ್ನಮ್ಮ ಎಸ್.‌

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಹೋಬಳಿಯ ಮದ್ದೂರು ಕಾಲೋನಿಯವರಾದ ಡಾ. ರತ್ನಮ್ಮ ಎಸ್.‌ ಅವರು ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ಹೋರಾಟ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ, ಸಮುದಾಯದ ಮನವೊಲಿಸಿ ಮಕ್ಕಳಿಗೆ ಶಾಲಾ ಕಾಲೇಜುಗಳಿಗೆ ದಾಖಲಿಸುವುದು, ಸಮುದಾಯದ ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವುದು. ಸಮುದಾಯದವರಿಗೆ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು, ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುವುದು. ಸಮುದಾಯದ ಕಲೆ, ಕುಲ ಕಸುಬು, ಸಂಸ್ಕೃತಿಯ ಸಂರಕ್ಷಿಸುವುದು ಹಾಗೂ ಪೋಷಿಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಇವರ ಅನುಪಮ ಸೇವೆಯನ್ನು ಗುರುತಿಸಿ, ಇವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಳಗಾವಿ ವಿಭಾಗದಿಂದ ಶ್ರೀ ರಾಜಶೇಖರ ತಳವಾರ

ಬೆಳಗಾವಿಯ ಗಾಂಧಿನಗರದವರಾದ ಇವರು ಗುಡ್ಡಗಾಡು ಪ್ರದೇಶಗಳಲ್ಲಿರುವ ಬುಡಕಟ್ಟು ಸಮುದಾಯದ ಜನರಿಗೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಬುಡಕಟ್ಟು ಸಮುದಾಯವು ವಾಸಿಸುವ ಮೂಲಭೂತ ಸೌಕರ್ಯಗಳಿಲ್ಲದ ಗುಡ್ಡಗಾಡು ಪ್ರದೇಶಗಳ ಬಗ್ಗೆ ವಿವಿಧ ಇಲಾಖೆಗಳ ಗಮನಕ್ಕೆ ತಂದು ಆ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ದೊರಕುವಂತೆ ಹಾಗೂ ಬುಡಕಟ್ಟು ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ. ಶಿಕ್ಷಣ ಕುರಿತು ಜಾಗೃತಿ ಮೂಡಿಸುವುದು, ಶಿಕ್ಷಣಕ್ಕೆ ಸಂಬಂಧಿಸಿದ ಸಮ್ಮೇಳನಗಳು, ಶಿಬಿರ, ತರಬೇತಿಗಳನ್ನು ಆಯೋಜಿಸುವುದು. ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ ಮುಂದುರೆಯಲು ಸರ್ಕಾರದ ನೆರವು ದೊರಕಿಸುವುದು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಸಮಾಜದ ಒಳಿತಿಗಾಗಿ ಸಲ್ಲಿಸಿರುವ ಸಮಾಜ ಸೇವೆಯನ್ನು ಗುರುತಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಎಲ್ಲರಿಗೂ ನಮ್ಮೂರ ಬಾನುಲಿ ನ್ಯೂಸ್ ವತಿಯಿಂದ ಅಭಿನಂದನೆಗಳು.💐💐

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";