ಹೈದರಬಾದ್: ಪುಷ್ಪ 2 ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ತುತ್ತಾಗಿ ಸಾವನಪ್ಪಿದ ಮಹಿಳೆಯ ಪ್ರಕರಣದ ಕುರಿತು, ಖ್ಯಾತ ತೆಲುಗು ನಟ ಅಲ್ಲು ಅರ್ಜುನ್ ರನ್ನು ಇಂದು ಬೆಳಿಗ್ಗೆ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಇದೀಗ ನ್ಯಾಯಾಲಯ ಹಲ್ಲು ಅರ್ಜುನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ಇಂದು ಬೆಳಿಗ್ಗೆ ಅಲ್ಲು ಅರ್ಜುನ್ ಅವರ ನಿವಾಸದಿಂದ ಅವರನ್ನು ಬಂಧಿಸಿ ಗಾಂಧಿ ಆಸ್ಪತ್ರೆಯಲ್ಲಿ, ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಅವರನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಈ ನೆಲೆಯಲ್ಲಿ ಅಲ್ಲು ಅರ್ಜುನ್ ಅವರನ್ನು, ಚಂಚಲಗೂಡು ಕಾರಾಗೃಹಕ್ಕೆ ರವಾನಿಸಲಾಗುವುದು ಎಂದು ಮಾಹಿತಿ ದೊರೆತಿದೆ.