ಬೆಳಗಾವಿ: ತಾಲೂಕಿನ ಹಿಂಡಲಗಾದ ಸುಳಗಾ ಗ್ರಾಮದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು. ಫ್ರೆಂಡ್ಸ್ ಜತೆ ಪಾರ್ಟಿ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ.
ಮೃತಪಟ್ಟ ವ್ಯಕ್ತಿಯನ್ನು ಬೆಳಗಾವಿ ನಗರದ ಶಹಾಪುರ ಬಶೀರ್ ಚಿಕ್ಕೋಡಿ ಎಂದು ಗುರುತಿಸಲಾಗಿದೆ. ಸಾರಿಗೆ ಬಸ್ ಚಾಲಕನಾಗಿದ್ದ ಬಶೀರ್ ಚಿಕ್ಕೋಡಿ ತನ್ನ ಸ್ನೇಹಿತರೊಂದಿಗೆ ಸೇರಿ ಹಿಂಡಲಾಗದ ಸುಳಗಾದಲ್ಲಿ ಪಾರ್ಟಿ ಮಾಡಲು ಹೋಗಿದ್ದರು ಈ ಸಂದರ್ಭದಲ್ಲಿ ಬಶೀರ್ ಮೃತಪಟ್ಟಿದ್ದಾನೆ.
ಆತನ ಶವವನ್ನ ಬಶೀರ್ ಗೆಳೆಯರು ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಇದೊಂದು ಸಹಜ ಸಾವಲ್ಲ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಂಠಪೂರ್ತಿ ಕುಡಿಸಿ ಹತ್ಯೆ ಮಾಡಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.