ಬೆಳಗಾವಿ: ಇತ್ತೀಚಿಗೆ ಜಾಗತಿಕ ಲಿಂಗಾಯತ ಮಹಾಸಭಾ ಮಹಾನಗರ ಹಾಗೂ ಬೆಳಗಾವಿ ತಾಲೂಕು ಘಟಕದ ವತಿಯಿಂದ ಆರ್. ಎನ್. ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಜರುಗಿದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಚನ ಕಂಠಪಾಠ ಸ್ಪರ್ಧೆಯಲ್ಲಿ ಮುಚ್ಚಂಡಿ ಗ್ರಾಮದ ಶ್ರೇಯಸ್ ಕುರಗುಂದಿ 180 ವಚನಗಳನ್ನು ಹೇಳುವುದರೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ಇದೇ ಗ್ರಾಮದ ಶ್ರವಣಕುಮಾರ ದೇವರಮನಿ 97 ಹಾಗೂ ಸುಪ್ರೀತಾ ಕುಂಬಾರ 96 ವಚನಗಳನ್ನು ಹೇಳಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಪ್ರಧಾನ ಕಾರ್ಯದರ್ಶಿ ಸಿ.ಎಂ. ಬೂದಿಹಾಳ ಸೇರಿದಂತೆ ಗ್ರಾಮಸ್ತರು, ಶಿಕ್ಷಕರು ಅಭಿನಂದಿಸಿದ್ದಾರೆ.
ವಿದ್ಯಾರ್ಥಿಗಳಿಗೆ ನಮ್ಮೂರ ಧ್ವನಿ ಸುದ್ಧಿ ವಾಹಿನಿಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು.💐👏🏻