Live Stream

[ytplayer id=’22727′]

| Latest Version 8.0.1 |

Local News

ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿದೆ: ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು

ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿದೆ: ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು

ಬೆಳಗಾವಿ:ಬಾಲ್ಯದಲ್ಲಿ ಶಿಕ್ಷಕರಿಂದ ಕಲಿತು ಉತ್ತಮ ಅವಕಾಶ ಪಡೆದ ಅನೇಕ ಸಾಧಕರು ಇಂದು ನಾಡಿನ ಹೆಸರಾಂತ ವೈದ್ಯ, ಇಂಜಿನಿಯರ್ ಸೇರಿದಂತೆ ಜಗತ್ತಿನ ಪ್ರಖ್ಯಾತ ವಿಜ್ಞಾನಿಯಾಗಿದ್ದಾರೆ. ಆದರೆ ಅವರಿಗೆ ಸ್ವತಃ ಎಣ್ಣೆ, ಬತ್ತಿಯಂತೆ ಉರಿದು ಜ್ಞಾನದ ಬೆಳಕನ್ನು ನೀಡಿದ ಶಿಕ್ಷಕರು ಮಾತ್ರ ಸಾಮಾನ್ಯರಲ್ಲಿ ಅತಿ ಸಾಮಾನ್ಯರಾಗಿ ಉಳಿದಿದ್ದಾರೆ. ಶಿಕ್ಷಕರಲ್ಲಿನ ಈ ಸರಳತೆಯಿಂದಾಗಿಯೇ ನಾಡು ಇಂದು ಅವರನ್ನು ಗೌರವಿಸುತ್ತಿದೆ. ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಇಂದು ನಾಗನೂರು ಶ್ರೀ ಪ್ರಭುದೇವ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರಿಗಾಗಿ ಹಮ್ಮಿಕೊಂಡಿದ್ದ ಆಂಗ್ಲ ಭಾಷೆ ಮತ್ತು ವಿಜ್ಞಾನ ವಿಷಯಗಳ ಪುನಶ್ಚೇತನ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ನೇತೃತ್ವ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಂ. ಕಾಂಬಳೆ ಮಹಾ ಎಂದರೆ ಎತ್ತರ, ಸ್ಥರ ಎಂದರೆ ಸ್ಥಳ ಯಾರು ಎತ್ತರವಾದ ಸ್ಥಾನದಲ್ಲಿ ಇರುತ್ತಾರೊ ಅವರೇ ಮಾಸ್ತರರು. ಆದ್ದರಿಂದ ಪ್ರಾಧ್ಯಾಪಕರು ತಮ್ಮ ವೃತ್ತಿ ಗೌರವವನ್ನು ಎತ್ತಿ ಹಿಡಿಯುವ ಕಾರ್ಯ ಪ್ರಾಮಾಣಿಕವಾಗಿ ಮಾಡಬೇಕು ಎಂದರು‌.

ವೇದಿಕೆಯ ಮೇಲೆ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ಹಿರೇಮಠ, ಪದವಿ ಪೂರ್ವ ಕಾಲೇಜುಗಳ ಮಹಾಮಂಡಳದ ಅಧ್ಯಕ್ಷ ಬಸವರಾಜ ಹಣ್ಣೂರ, ಉಪನ್ಯಾಸಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ಜಿ. ಮಠ, ಪ್ರಾಚಾರ್ಯ ಸಂಘದ ಕಾರ್ಯದರ್ಶಿ ವೈ. ಎಂ. ಪಾಟೀಲ, ಕಾಲೇಜಿನ ಪ್ರಾಚಾರ್ಯ ಸಿದ್ದರಾಮ ರೆಡ್ಡಿ, ವಿಜ್ಞಾನ ವಿಭಾಗದ ಪ್ರಾಚಾರ್ಯ ಸ್ವಪ್ನಾ ಜೋಷಿ, ದೈಹಿಕ ನಿರ್ದೇಶಕ ಪಿ. ಡಿ. ಶಿವನಾಯಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಾಗನೂರು ಶ್ರೀ ಪ್ರಭುದೇವ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಉದ್ಘಾಟಿಸಲಾಯಿತು ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಗಂಗಾಧರ ಬೆಟಗೇರಿ ಅವರನ್ನು ಸನ್ಮಾನಿಸಲಾಯಿತು. ಪ್ರಾರಂಭದಲ್ಲಿ ಪ್ರಾಧ್ಯಾಪಕ ಏ.ಕೆ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಶೇಖರ ಪಾಟೀಲ ನಿರೂಪಿಸಿದರು. ಗೀತಾ ಚೌಗಲೆ ವಂದಿಸಿದರು.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";