ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಈ ಹಿಂದೆ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಜಾತ್ರೆಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡಿಸಲಾಗಿದೆ.
ಸುಮಾರು 15 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿದ್ದು, ಜಾತ್ರೆಗೆ ಬೇಕಾಗಿರುವ ಸಕಲ ಸಹಕಾರ ಕೊಡುವುದಾಗಿ ಭರವಸೆ ನೀಡಲಾಗಿದೆ. ಜಾತ್ರೆ ಹತ್ತಿರದಲ್ಲಿರುವ ಕಾರಣ ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.