ಬೆಳಗಾವಿ: ನಗರದ ನೆಹರು ನಗರದಲ್ಲಿರುವ ಮಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಕಣ್ಣಿನ ತಜ್ಞರಾದ ಡಾ. ಹರ್ಷವರ್ಧನ್ ಪಾಟೀಲ್ ಹಾಗೂ ಡಾ. ಪ್ರಸಾದ್ ಜಿರಿಗೆ ಅವರು ಸತತ ಐದು ದಿನಗಳ ಕಾಲ ವಿದ್ಯಾರ್ಥಿಗಳ ಕಣ್ಣುಗಳ ತಪಾಸಣೆ ನಡೆಸಿ, ಅಗತ್ಯವಿದ್ದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಿದರು.
ಇತ್ತೀಚೆಗೆ ನಡೆದ ಈ ಕಾರ್ಯಕ್ರಮದ ಅಂಗವಾಗಿ ಒಟ್ಟು 117 ವಿದ್ಯಾರ್ಥಿಗಳ ಕಣ್ಣುಗಳನ್ನು ತಪಾಸಣೆ ಮಾಡಲಾಗಿದ್ದು, ಇದರಲ್ಲಿ ಸುಮಾರು 40 ವಿದ್ಯಾರ್ಥಿಗಳಿಗೆ ವೈದ್ಯರು ಸ್ವತಃ ಕನ್ನಡಕಗಳನ್ನು ನೀಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು.
ಅತಿಥಿಗಳನ್ನು ಸ್ವಾಗತಿಸಿ ಕಿರು ಪರಿಚಯವನ್ನು ಸಂಸ್ಥೆಯ ಪ್ರಥಮ ಉಪಾಧ್ಯಕ್ಷರಾದ ರಾಜೇಂದ್ರ ಮುಂದಡಾರವರು ಮಾಡಿದರು. ಸಂಸ್ಥೆಯ ಅಧ್ಯಕ್ಷರಾದ ಚಿಂತಾಮಣಿ ಗ್ರಾಮೋಪಾಧ್ಯಾಯ, ಜಂಟಿ ಕಾರ್ಯದರ್ಶಿಗಳಾದ ಕಾಂತೇಶ್ ಆಚಾರ್ಯ ಹಾಗೂ ಪ್ರಥಮ ಉಪಾಧ್ಯಕ್ಷರಾದ ರಾಜೇಂದ್ರ ಮುಂದಡಾರವರು ಅತಿಥಿಗಳನ್ನು ಸತ್ಕರಿಸಿದರು.
ಕಾರ್ಯಕ್ರಮದಲ್ಲಿ ಕಣ್ಣಿನ ತಜ್ಞರಾದ ಡಾ. ಹರ್ಷವರ್ಧನ್ ಪಾಟೀಲ್ ಅವರು ವಿದ್ಯಾರ್ಥಿಗಳ ಕಣ್ಣು ಆರೋಗ್ಯದ ಮಹತ್ವದ ಕುರಿತು ಮಾತನಾಡಿದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಚಿಂತಾಮಣಿ ಗ್ರಾಮೋಪಾಧ್ಯಾಯರು ಅಧ್ಯಕ್ಷೀಯ ಭಾಷಣ ಮಾಡಿದರು. ನಂತರ ಸಂಸ್ಥೆಯ ತೃತೀಯ ಉಪಾಧ್ಯಕ್ಷರಾದ ಅಶೋಕ ಚಿಂಡಕ್ ಅವರು ವಂದನಾರ್ಪಣೆ ಸಲ್ಲಿಸಿದರು.
ವಿದ್ಯಾರ್ಥಿಗಳಿಂದ ‘ವಂದೇ ಮಾತರಂ’ ಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಸಮಾಪ್ತಿ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಆನಂದ ಜೋಶಿ, ಎಂ.ಬಿ. ಪಾಟೀಲ್, ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನಿತಾ ಗಾವಡೆ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಹಾಯಕ ಶಿಕ್ಷಕಿಯಾದ ಶ್ರೀಮತಿ ತೇಜಸ್ವಿನಿ ಬಾಗೇವಾಡಿ ಅವರು ನೆರವೇರಿಸಿದರು.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143





















