ಯಮಕನಮರಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಹುಕ್ಕೇರಿ ತಾಲ್ಲೂಕಿನ ಮನಗುತ್ತಿ ಕ್ರಾಸ್ ಬಳಿಯ ಪುನಾ- ಬೆಂಗಳೂರು ಎನ್ಎಚ್ 4 ಹೆದ್ದಾರಿಯಲ್ಲಿ ನಡೆದಿದೆ.
ಚಿಕ್ಕೋಡಿಯಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಬಸ್‌ನ್ನು ಚಾಲಕ ಚಾಣಾಕ್ಷ ತನದಿಂದ ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಹೊರಗಿಳಿಸಿದ್ದಾರೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಬಸ್ಸಿನಲ್ಲಿ ಸುಮಾರು 25 ಜನ ಪ್ರಯಾಣಿಕರು ಇದ್ದರು ಬಸ್ಸಿನ ಚಾಲಕನ ಸಮಯ ಪ್ರಜ್ಞೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಚಾಣಾಕ್ಷತನದಿಂದ ಯಾವುದೇ ದೊಡ್ಡ ಅಪಘಾತ ಸಂಭವಿಸಿಲ್ಲ ಎಂದು ಬಸ್ಸಿನಲ್ಲಿ ಸಂಚರಿಸುತ್ತಿದ್ದ ಚಿಕ್ಕೋಡಿ ವಕೀಲರು ಬಸವರಾಜ್ ಒಸಿ ಅವರು ಹೇಳಿದರು
ಈ ಘಟನೆ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವರದಿ:ಕಲ್ಲಪ್ಪ ಪಾಮನಾಯಿಕ್