ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಬರಿ ಕಳ್ಳತನ ಪ್ರಕರಣವನ್ನು ಬಿಚ್ಚು ಹಾಕಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, 6.7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರು ಗೋಕಾಕ ತಾಲೂಕು ಪಾರನಟ್ಟಿ ಗ್ರಾಮದ ನಿವಾಸಿಗಳಾದ ಬಸವರಾಜ್ ಗೋದಿ, ಸಿದ್ದಪ್ಪ ಧರ್ಮಟ್ಟಿ, ಮುತ್ತೆಪ್ಪ ಪೂಜೇರಿ ಮತ್ತು ಬಸವರಾಜ್ ಪೂಜೇರಿ ಎಂದು ಗುರುತಿಸಲಾಗಿದೆ. ಆರೋಪಿಗಳು ಜನರನ್ನು ಬೆದರಿಸಿ ನಗದು ಮತ್ತು ಆಭರಣ ದೋಚುತ್ತಿದ್ದರೆಂದು ಪೊಲೀಸರು ತಿಳಿಸಿದರು.
ಬಂಧಿತರಿಂದ 12.5 ಗ್ರಾಂ ತೂಕದ ಚಿನ್ನದ ಸರ, 50 ಗ್ರಾಂ ತೂಕದ ಚಿನ್ನದ ಗಂಟೇನ್ ಹಾಗೂ ಬಂಗಾರದ ಎರಡು ಎಳೆ ಸರ ಸೇರಿದಂತೆ ಒಟ್ಟು 6,70,000 ರೂ. ಮೌಲ್ಯದ ಆಭರಣ ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ತನಿಖೆಯನ್ನು ವೇಗಗೊಳಿಸಲು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ ಅವರ ನಿರ್ದೇಶನದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ತಂಡದ ಕಾರ್ಯಾಚರಣೆಯಿಂದ ಆರೋಪಿಗಳ ಹೆಡೆಮುರಿ ಕಟ್ಟಲಾಗಿದೆ.
ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿಯುತ್ತಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143