ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ, ನಾಳೆ ಬೆಳಿಗ್ಗೆ 8ಗಂಟೆಯವರೆ ಎಸ್.ಎಂ.ಕೃಷ್ನ ಅವರ ಸದಾಶಿವ ನಗರ ನಿವಾಸದಲ್ಲಿಯೇ ಅವರ ಅಂತಿಮ ದರ್ಶನಕ್ಕೆ ಅವಕ್ಲಶವಿದೆ. ನಾಳೆ ಬೆಳಿಗ್ಗೆ 10 ಗಂಟೆ ಬಳಿಕ ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಪಾರ್ಥಿವ ಶರೀರ ಕರೆದೊಯ್ಯಲಾಗುವುದು. ಅಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಶ ನೀಡಲಾಗುವುದು ಎಂದರು.