ನಾಗನೂರು ರುದ್ರಾಕ್ಷಿ ಮಠ ಹಾಗೂ ಪ್ರಭುದೇವ ಪ್ರತಿಷ್ಠಾನ ಮಾತೃ ಮಂಡಳಿಯ ಸಹಯೋಗದೊಂದಿಗೆ ಜುಲೈ 10 ರಂದು ಇಲ್ಲಿನ ಶಿವಬಸವ ನಗರದ ರುದ್ರಾಕ್ಷಿ ಮಠದ ಪ್ರಭುದೇವ ಸಭಾಗೃಹದಲ್ಲಿ ಗುರುಪೂರ್ಣಿಮೆಯ ನಿಮಿತ್ತ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ಗುರುವಂದನ ಕಾರ್ಯಕ್ರಮದ ಸಾನಿಧ್ಯವನ್ನು ಗದುಗಿನ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸಲಿದ್ದು, ಸಮ್ಮುಖವನ್ನು ಮಲ್ಲನಕೇರಿ ವಿರಕ್ತ ಮಠದ ಚನ್ನಬಸವ ಮಹಾಸ್ವಾಮಿಗಳು ವಹಿಸಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ನಾಡಿನ ಧಾರ್ಮಿಕ, ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಧಾರವಾಡ ಮುರುಗಾ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳವರಿಗೆ ಗುರುವಂದನೆ ಸಲ್ಲಿಸಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಧಾರವಾಡದ ಹಿರಿಯ ಸಾಹಿತಿ ಡಾ. ಸಂಗಮನಾಥ ಲೋಕಾಪುರ ಇವರಿಗೆ ಗೌರವ ಸನ್ಮಾನ ಮಾಡಲಾಗುವುದು ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143