ಬೆಂಗಳೂರು: ರಾಜ್ಯದ ಕರಾವಳಿ ಭಾಗವನ್ನೊಳಗೊಂಡು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿರುಸಿನ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ತಿಳಿಸಿದೆ.
ಜೂನ್ 23ರಿಂದ 29ರವರೆಗೆ ಕೊಡಗು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೆ ಬಂದಿದೆ. ಕರಾವಳಿಯಲ್ಲಿ ಜೂನ್ 29ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಜೂನ್ 29ರವರೆಗೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ತುರ್ತು ನಿರ್ವಹಣೆಗಾಗಿ ಜಿಲ್ಲಾಡಳಿತಗಳು ಸಜ್ಜಾಗಿವೆ.
ಹವಾಮಾನ ದಿಂದಾಗಿ ಪ್ರವಾಹ, ಭೂಕುಸಿತದ ಸಂಭವವಿರುವ ಪ್ರದೇಶಗಳಲ್ಲಿ ಜನತೆ ಎಚ್ಚರಿಕೆಯಿಂದ ಇರಬೇಕೆಂದು ತುರ್ತು ನಿರ್ವಹಣಾ ಸಂಸ್ಥೆಗಳು ಸಲಹೆ ನೀಡಿವೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 95905 51177