ಸವದತ್ತಿ: ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ವೈ.ಬಿ. ಕಡಕೋಳ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಡಾ. ಮಹೇಶ ಗಾಜಪ್ಪನವರ ಅವರ ಮಾರ್ಗದರ್ಶನದಲ್ಲಿ “ತಲ್ಲೂರು ರಾಯನಗೌಡರು – ಸಮಗ್ರ ಅಧ್ಯಯನ” ವಿಷಯದ ಮೇಲೆ ಮಂಡಿಸಿದ ಪ್ರಬಂಧಕ್ಕೆ ಈ ಗೌರವ ಲಭಿಸಿದೆ.
ಶಿಕ್ಷಕ ಹಾಗೂ ಸಾಹಿತಿಗಳಾದ ಕಡಕೋಳ ಅವರು ಈಗಾಗಲೇ 40ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದು, ಅವರು ಬಾಳಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ “ಮುನವಳ್ಳಿ – ಒಂದು ಸಾಂಸ್ಕೃತಿಕ ಅಧ್ಯಯನ” ವಿಷಯದಲ್ಲಿ ಎಂ.ಫಿಲ್ ಪದವಿಯೂ ಪಡೆದಿರುವುದು ವಿಶೇಷ.
ಈ ಸಾಧನೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಂಗಲಾ ಮೆಟಗುಡ್ ಹಾಗೂ ಪ್ರಧಾನ ಕಾರ್ಯದರ್ಶಿ ಎಂ. ವೈ. ಮೆಣಸಿನಕಾಯಿ ಅವರು ವೈ.ಬಿ. ಕಡಕೋಳ ಅವರಿಗೆ ಪರಿಷತ್ತಿನ ವತಿಯಿಂದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.