ಹುಕ್ಕೇರಿ: ತಾಲ್ಲೂಕಿನ ಹೂಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶಿಂದಿಹಟ್ಟಿ ಗ್ರಾಮದ ರಾಮಪ್ಪ. ಲಕ್ಷ್ಮಣ. ಮಗದುಮ್ಮ ಇವರ ಮನೆಗೆ ಮದ್ಯ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಇರುವ ಚಿನ್ನಾಭರಣ ಹಾಗೂ ಇನ್ನು ಹಲವಾರು ವಸ್ತುಗಳು ಸುಟ್ಟು ಕರಕಲಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಸರಿಸುಮಾರು 10 ರಿಂದ 15 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ ಆದ್ದರಿಂದ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನೆಯ ಮಾಲೀಕ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ ವ್ಯಕ್ತಪಡಿಸಿದ್ದಾರೆ.
ವರದಿ:ಎ.ವೈ.ಸೋನ್ಯಾಗೋಳ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143