ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಕೊಡಗಾನೂರು ಗ್ರಾಮದಲ್ಲಿ ತಾಯಿ ಮಗನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ನಡೆದಿದೆ. ಜೋಡಿ ಕೊಲೆಯಿಂದ, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಚಂದ್ರವ್ವ ಅಪ್ಪಾರಾಯ ಇಚೇರಿ (62). ವಿಠ್ಠಲ್ ಅಪ್ಪರಾಯ ಇಚೇರಿ (42) ಮೃತ ದುರ್ದೈವಿಗಳು.
ಇಬ್ಬರನ್ನೂ ಹೊಡೆದು ಕೊಲೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಎಸೆದ ದುಷ್ಕರ್ಮಿಗಳು. ಸ್ಥಳಕ್ಕೆ ಅಥಣಿ ಪೊಲೀಸ್ ಭೇಟಿ ಪರಿಶೀಲನೆ ನಡೆದಿದೆ.