ಹಿಡಕಲ್ ಡ್ಯಾಂ: ಕರ್ನಾಟಕ ಸಾಂಸ್ಕೃತಿಕ ಸಂಭ್ರಮ ಅಂಗವಾಗಿ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ದಲ್ಲಿ ಮಂಗಳವಾರ ಸಂಜೆ 4:೦೦ ಗಂಟೆಗೆ ಮಹಿಳಾ ಸ್ವಧಾರ ವಸತಿ ಗೃಹದ ಸಭಾಂಗದಣದಲ್ಲಿ ಕವಿಗೋಷ್ಠಿ ಆಯೋಜಿಸಲಾಗಿದೆ. ಹಿರಿಯ ಸಾಹಿತಿ ಎಸ್ ಎಂ ಶಿರೂರ ಕವಿಗೋಷ್ಠಿ ಉದ್ಘಾಟಿಸಲಿದ್ದು ಹುಕ್ಕೇರಿ ಮಕ್ಕಳ ಸಾಹಿತ್ಯ ಪರಿಷತ್ ತಾಲೂಕಾ ಘಟಕದ ಅಧ್ಯಕ್ಷರಾದ ಡಾ. ಪ್ರಕಾಶ್ ಹೊಸಮನಿ ಅಧ್ಯಕ್ಷತೆ ವಹಿಸಲಿದ್ದಾರೆ . ಕವಿಗೋಷ್ಠಿಯನ್ನು ಮಹಿಳಾ ಕಲ್ಯಾಣ ಸಂಸ್ಥೆ ಹಾಗೂ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದೆ . ಹೆಚ್ಚಿನ ಸಂಖ್ಯೆಯಲ್ಲಿ ಕವಿಗಳು ಭಾಗವಹಿಸಬೇಕು ಎಂದು ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ 9590551177