ಕ್ರಾಸ್ ಕಂಟ್ರಿ ಸ್ಪರ್ಧೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹುಕ್ಕೇರಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ಉಪನಿರ್ದೇಶಕರ ಕಚೇರಿ ಚಿಕ್ಕೋಡಿ ಅಡಿಯಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ಹುಕ್ಕೇರಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಯರಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದ ಪ್ರಥಮ ಪಿಯುಸಿ ವಿಧ್ಯಾರ್ಥಿ ಕುಮಾರಿ ಕಲಾವತಿ ಮಲ್ಲಾಡಿ ಕ್ರಾಸ್ ಕಂಟ್ರಿ ಗುಡ್ಡ ಗಾಡು ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅದಲ್ಲದೆ 800 ಮೀ ರನ್ನಿಂಗ್ ನಲ್ಲಿ ಕುಮಾರಿ ಭಾಗ್ಯಶ್ರೀ ಬಾಗೇವಾಡಿ ದ್ವಿತೀಯ, ಎತ್ತರ ಜಿಗಿತದಲ್ಲಿ ಅಶ್ವಿನಿ ಕಮತಿ ತ್ರತೀಯ ಹಾಗೂ ರಿಲೆಯಲ್ಲಿ ಸಹ ಬಹುಮಾನ ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗೆ ಕಾಲೇಜಿನ ಪ್ರಾಚಾರ್ಯ ಕಿರಣ ಚೌಗಲಾ ಉಪ ಪ್ರಾಂಶುಪಾಲರಾದ ಶ್ರೀಮತಿ ಎ.ಆರ . ಮಠಪತಿ , ಮುಖ್ಯಾಧ್ಯಾಪಕರಾದ ಎಸ್.ಎ.ಸರಿಕರ, ಎಸ್.ಡಿ.ಎಂ.ಸಿ. ಅಧ್ಯಕ್ಷ ಶಂಕರ ಚೌಗಲಾ, ಉಪಾಧ್ಯಕ್ಷ ಮಲ್ಲಿಕಾರ್ಜುನ ನಂದಗಾವಿ ಸರ್ವ ಸದಸ್ಯರು, ಗ್ರಾಮದ ಪ್ರಮುಖರು ಶುಭ ಹಾರೈಸಿದ್ದಾರೆ.