ಬೆಳಗಾವಿ: 11E ನಕ್ಷೆ ತಯಾರಿಸಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಸ್ವೀಕರಿಸುತ್ತಿದ್ದಾಗಲೇ ಯಮಕನಮರಡಿ ಭೂ ಮಾಪಕ ಬಸವರಾಜ್ ಕಡಲಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಪ್ರಕಾಶ್ ಮೈಲಾಕಿ ಎಂಬುವವರಿಂದ 11E ನಕ್ಷೆ ಮಾಡಿಕೊಡಲು ಭೂ ಮಾಪಕ ಬಸವರಾಜ್ ಕಡಲಗಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪ್ರಕಾಶ್ ಮೈಲಾಕಿ ಅವರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಖಚಿತ ಮಾಹಿತಿ ಸಂಗ್ರಹಿಸಿದ ಲೋಕಾಯುಕ್ತ ಅಧಿಕಾರಿಗಳು, ಶುಕ್ರವಾರ ಯಮಕನಮರಡಿಯಲ್ಲಿ ಬಸವರಾಜ್ ಕಡಲಗಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ದಾಳಿ ನಡೆಸಿದರು. ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಬಸವರಾಜ್ ಕಡಲಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಈ ಕುರಿತು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143