ಬೆಳಗಾವಿ: ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ತಮ್ಮ ಗೃಹಲಕ್ಷ್ಮಿ ಹಣವನ್ನ ಕೂಡಿಟ್ಟು ಗ್ರಂಥಾಲಯ ತೆರೆದಿದ್ದಾರೆ.
ಕಾಂಗ್ರೆಸ್ನ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನ ಹಾಕಲಾಗುತ್ತಿದೆ. ಈ ಹಣದಿಂದ ಎಷ್ಟೋ ಮಹಿಳೆಯರು ಫ್ರಿಡ್ಜ್, ವಾಷಿಂಗ್ ಮಷಿನ್, ಮಕ್ಕಳಿಗೆ ಬೈಕ್ ಸೇರಿದಂತೆ ತಮ್ಮ ಚಿಕ್ಕ ಚಿಕ್ಕ ಆಸೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ. ಆದರೆ, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ತಮ್ಮ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಗ್ರಂಥಾಲಯ ತೆರೆದಿದ್ದಾರೆ.
ಗ್ರಾಮ ಪಂಚಾಯತ ಸದಸ್ಯರಾಗಿರುವ ಅವರು, ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ತಮ್ಮ ಹದಿಮೂರು ಕಂತಿನ ಗೃಹಲಕ್ಷ್ಮೀ ಹಣ ಹಾಗೂ ಪಂಚಾಯ್ತಿ ಸದಸ್ಯತ್ವದ ಗೌರವಧನವನ್ನು ಸೇರಿಸಿ ಮಕ್ಕಳ ಸಹಕಾರದಿಂದ ಒಂದು ಲಕ್ಷ ಐವತ್ತು ಸಾವಿರ ರೂ. ಖರ್ಚು ಮಾಡಿ ಸಣ್ಣ ಪ್ರಮಾಣದ ಗ್ರಂಥಾಲಯವನ್ನು ನಿರ್ಮಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.