ಹುಕ್ಕೇರಿ: ತಾಲೂಕಿನ ಯರಗಟ್ಟಿ ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸಮೂಹ ನೃತ್ಯ ಸ್ಪರ್ಧೆಯನ್ನು ಫೆ. 25ರಂದು ಸಾಯಂಕಾಲ 6 ಗಂಟೆಗೆ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾಗಿ ಪ್ರಥಮ ಬಹುಮಾನ ಪಡೆದ ತಂಡಕ್ಕೆ 20,000 ನಗದು ಹಾಗೂ ಪ್ರಮಾಣ ಪತ್ರ, ದ್ವಿತೀಯ ಬರುವ ತಂಡಕ್ಕೆ 15,000 ರೂಪಾಯಿಗಳ ನಗದು ಬಹುಮಾನ ಹಾಗೂ ತೃತೀಯ ಬಹುಮಾನ ಪಡೆದ ತಂಡಕ್ಕೆ 10,000 ರೂಪಾಯಿಗಳ ನಗದು ಬಹುಮಾನ ನೀಡಿ ಗೌರವಿಸಲಾಗುವುದು.
ಸಮೂಹ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ತಂಡಗಳು ದೂರವಾಣಿ ಸಂಖ್ಯೆ 959055177 ಗೆ ಫೆ. 22ರ ಒಳಗಾಗಿ ಹೆಸರು ನೋಂದಾಯಿಸಲು ಗೌರವ ಕಾರ್ಯದರ್ಶಿ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.