Live Stream

[ytplayer id=’22727′]

| Latest Version 8.0.1 |

Local NewsState News

ಭಾಷಾ ಸಂಘರ್ಷದಿಂದ ಅಭಿವೃದ್ಧಿಗೆ ಪೆಟ್ಟು: ಸಚಿವ ಸತೀಶ ಜಾರಕಿಹೊಳಿ

ಭಾಷಾ ಸಂಘರ್ಷದಿಂದ ಅಭಿವೃದ್ಧಿಗೆ ಪೆಟ್ಟು: ಸಚಿವ ಸತೀಶ ಜಾರಕಿಹೊಳಿ

 

ಬೆಳಗಾವಿ: ಭಾಷಾ ಸಂಘರ್ಷದಿಂದ ಶಾಂತಿ, ನೆಮ್ಮದಿ, ಉದ್ಯೋಗಕ್ಕೆ ಸಮಸ್ಯೆಯಾಗಲಿದೆ. ಕಾನೂನು ಸುವ್ಯವಸ್ಥೆಯ, ಶಾಂತಿ ಸೌಹಾರ್ದತೆಯನ್ನು ಕಾಪಾಡಬೇಕಿದೆ. ಗಡಿಭಾಷೆ ಸಂಘರ್ಷ ಮರುಕಳಿಸದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮಕೈಗೊಳ್ಳಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ ಸಚಿವರು, “ಇದು ಇಬ್ಬರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು. ಇದರಿಂದ ಬೆಳಗಾವಿಯ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ” ಎಂದು ಅವರು ಹೇಳಿದರು.

ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆಯಲಾಗಿದ್ದು, ಇದು ಇಬ್ಬರ ವೈಯಕ್ತಿಕ ಜಗಳ, ಭಾಷೆಗೆ ಇದು ವರ್ಗವಾಗಬಾರದು ಎಂಬುದು ನಮ್ಮ ಮನವಿ. ಕನ್ನಡ, ಮರಾಠಿ ಸಂಘಟನೆ ಎಂದು ಬಿಂಬಿಸಬಾರದು. ಅಂತಿಮವಾಗಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಪೆಟ್ಟು ಬಿಳಲಿದೆ. ಪೊಲೀಸ್ ಇಲಾಖೆ ತನಿಖೆ ಮಾಡುತ್ತಿದ್ದಾರೆ ಎಂದ ಅವರು, ಪೋಸ್ಕೋ ಕೇಸ್ ದಾಖಲು ಆಗಬಾರದು ಇತ್ತು. ಆದರೂ ಪೊಲೀಸ್ ರಿಂದ ತಪ್ಪಾಗಿದೆ, ಇದನ್ನು ಸರಿಪಡಿಸಲು ಅವಕಾಶವಿದೆ. ಮರು ಪರಿಶೀಲನೆ ಆಗಬೇಕಿದೆ ಎಂದರು.

ಎರಡು ರಾಜ್ಯಗಳ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ತೀವ್ರ ನಷ್ಟ ಉಂಟಾಗಲಿದೆ. ಪೊಲೀಸರ ಕೆಲಸವನ್ನು ಅವರಿಗೆ ಬಿಡಬೇಕು ಎಂದರು. ಶಿವಸೇನೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಬೇಡಿಕೆಯನ್ನು ಖಂಡಿಸಿದ ಅವರು, ಬೆಳಗಾವಿ ಮತ್ತು ಕೊಲ್ಹಾಪುರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.

ನಾಳೆ ನಡೆಯಲಿರುವ ಕರವೇ ಬೆಳಗಾವಿ ಚಲೋ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಸಚಿವರು, ಯಾರೂ ಕೂಡ ಬೆಳಗಾವಿಗೆ ಬರಬಾರದು ಎಂದು ವಿನಂತಿಸಿದರು. ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರು ದರಖಾಸ್ತಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಅವರಿಗೆ ಸಹಕಾರ ನೀಡಬೇಕು ಎಂದು ಸಚಿವ ಸತಿಶ್ ಜಾರಕಿಹೊಳಿ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ರಾಜು(ಆಸೀಫ್‌), ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಸಿದ್ದಕಿ ಅಂಕಲಗಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಇತರರು ಇದ್ದರು.

ವರದಿ:ಕಲ್ಲಪ್ಪ ಪಾಮನಾಯಿಕ್

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";