ಹುಕ್ಕೇರಿ : ತಾಲೂಕಿನ ಯಮಕನಮರಡಿ ಗ್ರಾಮದ ನರೇಗಾ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಹಿಡಕಲ್ ಡ್ಯಾಮ್ ಗೆ ತೆರಳುತ್ತಿದ ಸಮಯದಯಲ್ಲಿ ಕಾರ್ಮಿಕರಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ 25 ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ.
https://youtu.be/RgmJ1aDRVQo ಯಮಕನಮರಡಿ ಗ್ರಾಮದ ನರೇಗಾ ಕೂಲಿ ಕಾರ್ಮಿಕರ ಗೂಡ್ಸ್ ವಾಹನ ಪಲ್ಟಿ
ಹಿಡಕಲ್ ಡ್ಯಾಮ್ ಬಳಿ ಇರುವ ಸಂಗಮ್ ಸಹಕಾರಿ ಸಕ್ಕರೆ ಕಾರ್ಖಾನೆ ಬಳಿ ಇಂದು ಬೆಳಿಗ್ಗೆ ನರೇಗಾ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಹಿಡಕಲ್ ಡ್ಯಾಮ್ ಗೆ ತೆರಳುತ್ತಿರುವಾಗ ಬುಲೆಟ್ ಬೈಕ್ ಒಂದು ಗೂಡ್ಸ್ ವಾಹನಕ್ಕೆ ಅಡ್ಡಿ ಬಂದ ಪರಿಣಾಮ, ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರ್ಮಿಕರಿದ್ದ ಗೂಡ್ಸ್ ವಾಹನ ಪಲ್ಟಿಯಾಗಿದೆ. ಇದರ ಪರಿಣಾಮ ಕಾರ್ಮಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯರ ಸಹಕಾರದಿಂದ ಕ್ರೂಜರ್ ವಾಹನದಲ್ಲಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಬುಲೆಟ್ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾದ ಕಾರ್ಮಿಕರಿಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗಳಾದ ಕಾರ್ಮಿಕರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇನ್ನೂ ಈ ಪ್ರಕರಣ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ಮಾಡುತ್ತಿದ್ದಾರೆ.