ಹುಕ್ಕೇರಿ: ಜಿಲ್ಲೆಯ ಪ್ರತಿಷ್ಠಿತ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ ಸಂಜೆ ಅವರು ರಾಜೀನಾಮೆ ನೀಡಿದ್ದು, ಹುಕ್ಕೇರಿ ಕ್ಷೇತ್ರದ ಶಾಸಕ ಹಾಗೂ ಕಾರ್ಖಾನೆಯ ಅಧ್ಯಕ್ಷ ಎರಡು ಹುದ್ದೆಗಳಿಂದ
ಕೆಲಸದ ಒತ್ತಡ ಹೆಚ್ಚಾಗಿದ್ದು ಹಾಗೂ ಹುಕ್ಕೇರಿ ಮತ ಕ್ಷೇತ್ರದ ಜನರ ಕೆಲಸ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ಕಾರ್ಖಾನೆಯ ಅಧ್ಯಕ್ಷ ಸ್ಥಾನ ನಿಭಾಯಿಸಲು ತೊಂದರೆ ಆಗುತ್ತಿರುವುದರಿಂದ ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ವರದಿ:ಕಲ್ಲಪ್ಪ ಪಾಮನಾಯಿಕ್