ಬೆಳಗಾವಿ: ನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ಎನ್.ವಿ. ಭರಮನಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಧಾರವಾಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಭರಮನಿ ಅವರನ್ನು ರಾಜ್ಯ ಸರ್ಕಾರ ಬೆಳಗಾವಿ ನಗರಕ್ಕೆ ನಿಯುಕ್ತಿಗೊಳಿಸಿತ್ತು.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ, ಹುದ್ದೆಯನ್ನು ನಿರಂಜನ ರಾಜೆ ಅರಸ ಅವರು ಭರಮನಿಗೆ ಹಸ್ತಾಂತರಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಡಿಸಿಪಿ ನಾರಾಯಣ ಭರಮನಿ, “ರಾಜ್ಯ ಸರ್ಕಾರ ನನ್ನನ್ನು ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿಯಾಗಿ ನೇಮಕ ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರದ ಶಾಂತಿ ಹಾಗೂ ಭದ್ರತೆ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇನೆ,” ಎಂದು ಹೇಳಿದರು.
ನೂತನ ಡಿಸಿಪಿಯ ಅಧಿಕಾರ ಸ್ವೀಕಾರದೊಂದಿಗೆ, ನಗರದಲ್ಲಿ ಕಾನೂನು ಸುವ್ಯವಸ್ಥೆಯ ಬಲವರ್ಧನೆಗೆ ಹೊಸ ಉತ್ಸಾಹ ಮೂಡಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143