ಬೆಂಗಳೂರು: ರಾಜ್ಯಾದ್ಯಂತ ಮಳೆರಾಯ ಅಬ್ಬರ ತೋರಿಸುತ್ತಿದ್ದು, ಮುಂದಿನ ಆರು ದಿನಗಳವರೆಗೆ, ಅಂದರೆ ಜುಲೈ 10ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ಮತ್ತು ಮುಂದಿನ ದಿನಗಳಲ್ಲಿ ಕೆಲವೊಂದು ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಹಲವು ಮುನ್ಸೂಚನೆಗಳನ್ನು ಪ್ರಕಟಿಸಿದೆ.
ಇಂದು ರೆಡ್ ಅಲರ್ಟ್ ಘೋಷಿಸಿರುವ ಜಿಲ್ಲೆಗಳು:
- ಹಾಸನ
- ಶಿವಮೊಗ್ಗ
- ಚಿಕ್ಕಮಗಳೂರು
- ಉತ್ತರ ಕನ್ನಡ
- ದಕ್ಷಿಣ ಕನ್ನಡ
- ಉಡುಪಿ
ಈ ಜಿಲ್ಲೆಗಳಲ್ಲಿ ಅಪಾಯದ ಮಟ್ಟದ ಮಳೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ.
ಆರೆಂಜ್ ಅಲರ್ಟ್:
- ಬೆಳಗಾವಿ
- ಕೊಡಗು
ಯೆಲ್ಲೋ ಅಲರ್ಟ್:
- ಧಾರವಾಡ
ಇತರ ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಈ ಜಿಲ್ಲೆಗಳು ಹೀಗಿವೆ: ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ.
ಸಾರ್ವಜನಿಕರು ಅವಶ್ಯಕತೆ ಇಲ್ಲದಿದ್ದರೆ ಹೊರಗೆ ಹೋಗುವುದನ್ನು ತಪ್ಪಿಸಿ, ಸ್ಥಳೀಯ ಅಧಿಕಾರಿಗಳ ಸೂಚನೆ ಪಾಲನೆ ಮಾಡುವಂತೆ ಕೋರಲಾಗಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
9164577143