ವಾರ್ತಾ ಇಲಾಖೆಯಿಂದ ಬಾಪೂಜಿ ಪ್ರಬಂಧ ಸ್ಪರ್ಧೆ
ಬೆಂಗಳೂರು, ಆ.20: ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ‘ಮಹಾತ್ಮ ಗಾಂಧೀಜಿಯವರ ವಿಚಾರಗಳ ಕುರಿತು’ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ Ⓡ ಒಟ್ಟು 3 ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ-31 ಸಾವಿರ ರೂ., ದ್ವಿತೀಯ-21 ಸಾವಿರ ರೂ. ಮತ್ತು ತೃತೀಯ ಬಹುಮಾನ11 ಸಾವಿರ ರೂ., ಜಿಲ್ಲಾಮಟ್ಟದಲ್ಲಿ ಪ್ರಥಮ-3 ಸಾವಿರ ರೂ., ದ್ವಿತೀಯ-2 ಸಾವಿರ ರೂ. ಮತ್ತು ತೃತೀಯ ಬಹುಮಾನ 1ಸಾವಿರ ರೂ. ನೀಡಲಾಗುವುದು.
ಪ್ರೌಢಶಾಲಾ ವಿಭಾಗದಲ್ಲಿ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು. ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿನ ವಿದ್ಯಾರ್ಥಿಗಳು ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1,500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಅದೇ ರೀತಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2,000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಸ್ಪರ್ಧೆಗಳನ್ನು ಸೆ.6ರ ಒಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ఇలావాయు ಜಿಲ್ಲಾಡಳಿತದ ಸಹಯೋಗದೊಂದಿಗೆ ಆಯೋಜಿಸಲಾಗುತ್ತದೆ. ಸೆ.10ರೊಳಗಾಗಿ ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸುವುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ.