ರಾಮನಗರ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಆಗತಾನೆ ಹುಟ್ಟಿದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ.
2 ದಿನದ ನವಜಾತ ಶಿಶುವಿನ ದೇಹ ಪತ್ತೆಯಾಗಿದ್ದು, ರಾಮನಗರದ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಟಾಯ್ಲೆಟ್ ಪರಿಶೀಲನೆ ವೇಳೆ ಗಂಡು ಮಗುವಿನ ಶವ ಪತ್ತೆಯಾಗಿದೆ. ತಾಯಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಹಾರೋಹಳ್ಳಿ ಪೊಲೀಸರು ಇದರ ಕುರಿತು ತನಿಖೆ ನಡೆಸುತ್ತಿದ್ದಾರೆ.