ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್
ದೈನಂದಿನ ಜೀವನದಲ್ಲಿನ ಅನೇಕ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಇಂದು ಶಿವಬಸವ ನಗರದ ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಅಂಗವಾಗಿ ಇಂಟರ್ನಲ್ ಹ್ಯಾಕಥಾನ್ ಆಯೋಜಿಸಲಾಗಿತ್ತು . ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಚೇರ್ಮನ್ ಎಫ್.ವಿ. ಮಾನ್ವಿ ಹ್ಯಾಕಥಾನ್ ಗೆ ಚಾಲನೆ ನೀಡಿ ಮಾತನಾಡಿ ದೇಶದ ಜ್ವಲಂತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸಲು ಹ್ಯಾಕಥಾನ್ ವಿದ್ಯಾರ್ಥಿಗಳಿಗೆ ಒಂದು ಉತ್ತಮ ವೇದಿಕೆಯಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಚಾರ್ಯ ಡಾ. ಬಿ.ಆರ್. ಪಟಗುಂದಿ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.