ಬೆಳಗಾವಿ: ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಸಿದ್ದರಾಮೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆ* ನಗರದ ಅಂಜುಮನ್ ಶಾಲೆಯಲ್ಲಿ ಆಯೋಜಿಸಿದ್ದ ಬೆಳಗಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸಿದ್ದರಾಮೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದುಕೊಂಡರು. ಅದೇ ರೀತಿ ದ್ವಿತೀಯ ಸ್ಥಾನವನ್ನು ಸಿದ್ಧರಾಮೇಶ್ವರ ಸಂಯುಕ್ತ ಪ. ಪೂ. ಮಹಾವಿದ್ಯಾಲಯದ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಡೆದುಕೊಂಡರು. ಈ ಕ್ರೀಡಾಕೂಟವನ್ನು ದೈಹಿಕ ಶಿಕ್ಷಕರಾದ ಶ್ರೀಧರ ನೇಮಗೌಡ ಹಾಗೂ ರಿತೇಶ್ ಸಜ್ಜನ್ ನಡೆಸಿಕೊಟ್ಟರು. ವಿಜೇತ ತಂಡವನ್ನು ಗದುಗಿನ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹಾಗೂ ಶಾಲೆಯ ಪ್ರಾಚಾರ್ಯರು ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಅಭಿನಂದಿಸಿದ್ದಾರೆ.
Nammur Dhwani > Local News > ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶ್ರೀ ಸಿದ್ದರಾಮೇಶ್ವರ ಆಂಗ್ಲ ಮಾಧ್ಯಮ ಶಾಲೆ ಪ್ರಥಮ