ಹುಕ್ಕೇರಿ: ಗೋವಧೆ ವಿರೋಧಿಸಿ ಗೋ ರಕ್ಷಣೆಗೆ ಮುಂದಾದ ಸಂದರ್ಭ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದಾಗಿ ಆರೋಪಿಸಲಾಗಿದೆ. ಈ ಘಟನೆಯಿಂದ ಉದ್ವಿಗ್ನಗೊಂಡಿರುವ ಶ್ರೀರಾಮ ಸೇನೆಯ ನಾಯಕರು, ಜುಲೈ 3ರಂದು ಹುಕ್ಕೇರಿ ಬಂದ್ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ “ಚಲೋ ಇಂಗಳಗೆ” ಎಂಬ ಹೆಸರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಕೈಗೊಳ್ಳಲಾಗುತ್ತದೆ. ಸಂಘಟನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರು ಮಾತನಾಡಿ, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ಕಾರ್ಯಕರ್ತರ ರಕ್ಷಣೆಯಲ್ಲಿ ಗಂಭೀರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅವರು ಹೇಳಿದರು.
ಹಲ್ಲೆಯ ಈ ಘಟನೆ ಹಿಂದೂ ಕಾರ್ಯಕರ್ತರಲ್ಲಿ ಆಕ್ರೋಶ ಹೆಚ್ಚಿಸಿದ್ದು, ಸರ್ಕಾರದ ನಿಷ್ಕ್ರಿಯತೆ ವಿರುದ್ಧ ಶ್ರೀರಾಮ ಸೇನೆಯ ಮುಖಂಡರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143