ಬೆಳಗಾವಿ: ನಗರದ ಸಿದ್ಧರಾಮೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಕು. ಅಕ್ಷತಾ ಸಿ ಇವರು ಜೈಪುರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆ ಆಗಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಬೆಳಗಾವಿ ಜಿಲ್ಲೆ ಹಾಗೂ ಕರ್ನಾಟಕವನ್ನು ಪ್ರತಿನಿಧಿಸುವ ಇವರಿಗೆ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್. ಪಿ. ಹಿರೇಮಠ, ಕಾಲೇಜಿನ ಪ್ರಾಚಾರ್ಯ ಸಿದ್ದರಾಮ ರೆಡ್ಡಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀಧರ ನೇಮಗೌಡ ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಕೋರಿದ್ದಾರೆ.
ಕುಮಾರಿ ಅಕ್ಷತಾ ಅವರಿಗೆ ನಮ್ಮೂರ ಧ್ವನಿ ಸುದ್ದಿ ವಾಹಿನಿಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು. 💐👏🏻❤️