ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ವಿಶ್ವ ವಿದ್ಯಾಲಯವಾಗಿರುವ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಬ್ರಿಟಿಷ್ ಕೌನ್ಸಿಲ್ನವರು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದಲ್ಲಿ, ಇಂಗ್ಲೆಂಡಿನ ಯುನಿವರ್ಸಿಟಿ ಆಫ್ ಈಸ್ಟ್ ಲಂಡನ್ ಗೆ 15 ದಿನಗಳ ಕಾಲ 5 ವಿದ್ಯಾರ್ಥಿಗಳು ಅಧ್ಯಯನ ಪ್ರವಾಸಕ್ಕೆ ಹೊರಟಿದ್ದಾರೆ.
ನ. 09 ರಿಂದ 23ರ ವರೆಗೆ ಅಧ್ಯಯನ ಪ್ರವಾಸಕ್ಕೆ ಹೊರಟಿರುವ ವಿದ್ಯಾರ್ಥಿಗಳಲ್ಲಿ, ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜಿನ ಮೀರಾ ನದಾಫ್, ಅನಾಮಿಕ ಶಿಂದೆ, ಖಾನಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವರಾಜ್ ಪಾಟೀಲ್, ಗೋಕಾಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಜಗದೀಶ್ ಅರಭಾವಿ ಮತ್ತು ದಾನೇಶ್ವರಿ ಮಾದರ ಈ ಅಧ್ಯಯನ ಪ್ರವಾಸಕ್ಕೆ ಹೊರಟಿರುವ ವಿದ್ಯಾರ್ಥಿಗಳು.
ಆರ್ ಸಿ ಯು ನಿಂದ ಇದೇ ಪ್ರಥಮ ಬಾರಿ ವಿದ್ಯಾರ್ಥಿಗಳು ಅಧ್ಯಯನ ಪ್ರವಾಸಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ. ರಾಜ್ಯದಲ್ಲಿ 6 ವಿವಿಗಳ 30 ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಆರ್ ಸಿ ಯು ನವರು ಐವರಿದ್ದಾರೆ. ಪ್ರವಾಸದ ವಿಸಾ ಹಾಗೂ ಇತರೆ ಖರ್ಚುಗಳನ್ನು ಬ್ರಿಟಿಷ್ ಕೌನ್ಸಿಲ್ ಭರಿಸಲಿದೆ. ರೂ.5 ಲಕ್ಷ ಪ್ರಯಾಣ ವೆಚ್ಚವನ್ನು ಆರ್‌ಸಿಯುನಿಂದ ಭರಿಸಲಾಗುತ್ತಿದೆ.
ಜಿಲ್ಲೆಗೆ ಹೆಮ್ಮೆ ತಂದ ಐವರು ವಿದ್ಯಾರ್ಥಿಗಳಿಗೆ ನಮ್ಮೂರ ಧ್ವನಿ ಸುದ್ದಿ ವಾಹಿನಿಯ ಕಡೆಯಿಂದ ಹೃತ್ಪೂರ್ವಕ ಅಭಿನಂದನೆಗಳು.💐💐