Live Stream

[ytplayer id=’22727′]

| Latest Version 8.0.1 |

Local News

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ, ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದಲ್ಲಿ ಶರಣಬಸವ ದೇವರು ಹೇಳಿಕೆ

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ, ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದಲ್ಲಿ ಶರಣಬಸವ ದೇವರು ಹೇಳಿಕೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮದ ಶ್ರೀ ಬಸವೇಶ್ವರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಬೆಳವಿ ಗ್ರಾಮದ ಶರಣಬಸವ ದೇವರು ಮಾತನಾಡಿ ಪಿ.ಯು.ಸಿ ಎಂಬುದು ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಮೂಲ್ಯವಾದ ಘಟ್ಟವಾಗಿದ್ದು ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಸಾಧನೆ ಇರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮೂಡಲಗಿಯ ಶ್ರೀ ಶಿವ ಬೋದರಂಗ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಎ.ಜಿ ನಸಬಿ ಮಾತನಾಡಿ ವಿದ್ಯಾರ್ಥಿಗಳು ಜೀವನದ ಪ್ರತಿಯೊಂದು ಹಂತದಲ್ಲಿ ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಿ ತಮ್ಮ ಜೀವನವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಗುರಪ್ಪ ತಳವಾರ ಅವರು ಸತತ 30 ವರ್ಷಗಳಿಂದ ಈ ಭಾಗದ ಪೂಜ್ಯರ ಆಶೀರ್ವಾದ ಹಾಗೂ ಶಿಕ್ಷಣ ಪ್ರೇಮಿಗಳ ಪ್ರೋತ್ಸಾಹ ದೊಂದಿಗೆ ಇಂದು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುತ್ತಾ ಬಂದಿದ್ದು ಸಂತೋಷಕರವಾಗಿದೆ ಮಹಾವಿದ್ಯಾಲಯದ ಹೇಳಿಕೆಗಾಗಿ ದುಡಿಯುತ್ತಿರುವ ಎಲ್ಲಾ ಸಿಬ್ಬಂದಿಗಳ ಪಾತ್ರವನ್ನು ನೆನೆಯಲೇಬೇಕು ಎಂದು ಹೇಳಿದರು.

ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಆರ್ ಎಸ್ ನಾಶಿಪುಡಿ ಅತಿಥಿ ಪರಿಚಯ ಹಾಗೂ ಸ್ವಾಗತ ಭಾಷಣವನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಯುವ ಅಧ್ಯಕ್ಷರಾದ ಅನಿಲ ತಳವಾರ ಪದವಿಪೂರ್ವ ಹಾಗೂ ಪದವಿ ವಿಭಾಗದ ಎಲ್ಲ ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿಯದ ಶ್ರೀಮತಿ ಆರ್. ಆರ್. ಹಿರೇಮನಿ ಮಾಲಾರ್ಪಣೆ ಕಾರ್ಯಕ್ರಮ ನೆರವೇರಿಸಿ ಕೊಟ್ಟರು. ಶ್ರೀ ಆರ್ ಪಿ ನಾಯಕ್ ಹಾಗೂ ಆರ್ಜಿ ಹವಾಲ್ದಾರ್ ಉಪನ್ಯಾಸಕರು ಜಂಟಿಯಾಗಿ ಬಹುಮಾನ ವಿತರಣೆ ಕಾರ್ಯಕ್ರಮವನ್ನು ನೆರವೇರಿಸಿದರು.

ವಾಣಿಜ್ಯಶಾಸ್ತ್ರದ ಉಪನ್ಯಾಸಕರಾದ ಶ್ರೀ ಎಸ್ ಸಿ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿದ ನಿಕಿತಾ ಮಲನಾಯಕ ವಂದಿಸಿದರು.

ವರದಿ: ಎ.ವೈ.ಸೋನ್ಯಾಗೋಳ
ಸುದ್ದಿ ಹಾಗೂ ಜಾಹೀರಾತುಗಳಿಗಾಗಿ ಸಂಪರ್ಕಿಸಿ ನಮ್ಮೂರ ಧ್ವನಿ

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";