40ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಸಾಮಗ್ರಿ ವಿತರಣೆ ಶ್ರೀ ದಾನಮ್ಮದೇವಿ ಮೂರ್ತಿ ಪ್ರತಿಷ್ಠಾಪನೆಯ 40ನೇ ವಾರ್ಷಿಕೋತ್ಸವ ಸಮಾರಂಭ
40ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಸಾಮಗ್ರಿ ವಿತರಣೆ ಕಾರ್ಯಕ್ರಮವನ್ನು ಫೆಬ್ರುವರಿ 6 ರಿಂದ 11, 2025 ರ ವರೆಗೆ ಬೆಳಗಾವಿ ಶಹಾಪುರದಲ್ಲಿ ಆಯೋಜಿಸಲಾಗಿದೆ. ಗುರುವಾರ ಫೆ. 6 ರಂದು ಮುಂಜಾನೆ 10.15ಕ್ಕೆ ರಕ್ತದಾನ ಶಿಬಿರವನ್ನು ಶ್ರೀ ಜಗಜ್ಯೋತಿ ಬಸವೇಶ್ವರ ಕಲ್ಯಾಣಮಂದಿರ ಟ್ರಸ್ಟ್ ಮತ್ತು ಕೆಎಲ್‌ಇ ಆಸ್ಪತ್ರೆ ರಕ್ತಭಂಡಾರ ಇವರ ಸಹಯೋಗದಲ್ಲಿ ಜರುಗಲಿದ್ದು ಡಾ.ಸುರೇಶ ಅವರು ಉದ್ಘಾಟನೆ ಮಾಡಲಿದ್ದಾರೆ.
ಸೋಮವಾರ ಫೆ. 10 ರಂದು ವಾರ್ಷಿಕೋತ್ಸವ ನಿಮಿತ್ತ ಸಾಮಗ್ರಿಗಳ ವಿತರಣೆ ಮಾಡಲಾಗುತ್ತಿದೆ. ಸಾನ್ನಿಧ್ಯವನ್ನು ಕಾರಂಜಿಮಠದ ಪೂಜ್ಯ ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀ ಮಹಾಂತೇಶ ಕವಟಗಿಮಠ ಆಗಮಿಸಲಿದ್ದು, ಬೆಳಗಾವಿ ಮಹಾಸಭೆ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮಹಿಳಾ ಮಂಡಳ ಅಧ್ಯಕ್ಷೆ ಶ್ರೀಮತಿ ಶೈಲಜಾ ಭಿಂಗೆ ಹಾಗೂ ಮಹಾಸಭೆ ಜಿಲ್ಲಾ ಘಟಕದ ಉಪಾಧ್ಯಕ್ಷೆ ಹಾಗೂ ಖ್ಯಾತ ಸಾಹಿತಿ ಡಾ.ಗುರುದೇವಿ ಹುಲೆಪ್ಪನವರಮಠ ಅವರನ್ನು ಸನ್ಮಾನಿಸಲಾಗುತ್ತಿದೆ. ಮಂಗಳವಾರ ಫೆ. 11 ರಂದು ಮಧ್ಯಾಹ್ನ ಮಹಾಪ್ರಸಾದವನ್ನು ವಿತರಿಸಲಾಗುತ್ತಿದೆ ಎಲ್ಲ ಭಕ್ತಾದಿಗಳು ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದಾನಮ್ಮದೇವಿ ವಾರ್ಷಿಕೋತ್ಸವ ಸಮಿತಿ ಕಾರ್ಯದರ್ಶಿ ಸಿ.ಎಂ.ಕಿತ್ತೂರು ಅಧ್ಯಕ್ಷರಾದ ಚಂದ್ರಶೇಖರ ಬೆಂಬಳಗಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆಬ್ರುವರಿ 6 ರಿಂದ 11, 2025 ರ ವರೆಗೆ ಬೆಳಗಾವಿ ಶಹಾಪುರದಲ್ಲಿ ಆಯೋಜಿಸಲಾಗಿದೆ. ಗುರುವಾರ ಫೆ. 6 ರಂದು ಮುಂಜಾನೆ 10.15ಕ್ಕೆ ರಕ್ತದಾನ ಶಿಬಿರವನ್ನು ಶ್ರೀ ಜಗಜ್ಯೋತಿ ಬಸವೇಶ್ವರ ಕಲ್ಯಾಣಮಂದಿರ ಟ್ರಸ್ಟ್ ಮತ್ತು ಕೆಎಲ್‌ಇ ಆಸ್ಪತ್ರೆ ರಕ್ತಭಂಡಾರ ಇವರ ಸಹಯೋಗದಲ್ಲಿ ಜರುಗಲಿದ್ದು ಡಾ.ಸುರೇಶ ಅವರು ಉದ್ಘಾಟನೆ ಮಾಡಲಿದ್ದಾರೆ.
ಸೋಮವಾರ ಫೆ. 10 ರಂದು ವಾರ್ಷಿಕೋತ್ಸವ ನಿಮಿತ್ತ ಸಾಮಗ್ರಿಗಳ ವಿತರಣೆ ಮಾಡಲಾಗುತ್ತಿದೆ. ಸಾನ್ನಿಧ್ಯವನ್ನು ಕಾರಂಜಿಮಠದ ಪೂಜ್ಯ ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀ ಮಹಾಂತೇಶ ಕವಟಗಿಮಠ ಆಗಮಿಸಲಿದ್ದು, ಬೆಳಗಾವಿ ಮಹಾಸಭೆ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮಹಿಳಾ ಮಂಡಳ ಅಧ್ಯಕ್ಷೆ ಶ್ರೀಮತಿ ಶೈಲಜಾ ಭಿಂಗೆ ಹಾಗೂ ಮಹಾಸಭೆ ಜಿಲ್ಲಾ ಘಟಕದ ಉಪಾಧ್ಯಕ್ಷೆ ಹಾಗೂ ಖ್ಯಾತ ಸಾಹಿತಿ ಡಾ.ಗುರುದೇವಿ ಹುಲೆಪ್ಪನವರಮಠ ಅವರನ್ನು ಸನ್ಮಾನಿಸಲಾಗುತ್ತಿದೆ. ಮಂಗಳವಾರ ಫೆ. 11 ರಂದು ಮಧ್ಯಾಹ್ನ ಮಹಾಪ್ರಸಾದವನ್ನು ವಿತರಿಸಲಾಗುತ್ತಿದೆ ಎಲ್ಲ ಭಕ್ತಾದಿಗಳು ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದಾನಮ್ಮದೇವಿ ವಾರ್ಷಿಕೋತ್ಸವ ಸಮಿತಿ ಕಾರ್ಯದರ್ಶಿ ಸಿ.ಎಂ.ಕಿತ್ತೂರು ಅಧ್ಯಕ್ಷರಾದ ಚಂದ್ರಶೇಖರ ಬೆಂಬಳಗಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.