ಬೆಂಗಳೂರು: ನಗರದ ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ, ಕಾರ್ಯಕ್ರಮದಲ್ಲಿ ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತವನ್ನು ಹೆಚ್ಚಿಸುವ ಜೊತೆಗೆ ಕಲಾವಿದರ ಮಾಸಾಶನವನ್ನು 2500 ರೂಗಳಿಂದ 3000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.ಈ ಸಂಧರ್ಭದಲ್ಲಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕರು, ಕಲಾವಿದರು ಹಾಗೂ ಇತರರು ಉಪಸ್ಥಿತರಿದ್ದರು.