ಬೆಳಗಾವಿ: ನಗರದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಚಂದ್ರಗಿರಿ ಮಹಿಳಾ ಶಿಕ್ಷಣ ಮಹಾವಿದ್ಯಾಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪರಮ ಪೂಜ್ಯ ಡಾ. ಅಲ್ಲಮ ಪ್ರಭುಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವನ್ನು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರೋ. ಶ್ರೀಮತಿ ಮೇಘಾ ಗಲಗಲಿರವರು ಮಾತನಾಡಿ, ಮಹಿಳೆಯರು ಕುಟುಂಬದ ಜೋತೆಗೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಮಾಜಿಕ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಭಾರತದ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವಲ್ಲಿ ಮಹಿಳೆಯರ ಪಾತ್ರ ದೊಡ್ಡದು ಎಂದರು ಅಧ್ಯಕ್ಷೀಯ ಪರ ನುಡಿ ನೀಡಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಲ್. ಎಲ್ ಪಾಟೀಲರವರು ಪುರುಷ ಒಂದು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದರೆ, ಮಹಿಳೆ ಕುಟುಂಬ ಹಾಗೂ ಶೈಕ್ಷಣಿಕ ಕ್ಷೇತ್ರದ ಜೊತೆಗೆ ಹಲವಾರು ಜವಾಬ್ದಾರಿಯನ್ನು ನಿರ್ವಹಿಸುವವಳು ಮಹಿಳೆ ಎಂದರು.
ಕಾರ್ಯಕ್ರಮದಲ್ಲಿ ಗಣ್ಯಮಾನ್ಯರನ್ನು ವಿದ್ಯಾರ್ಥಿ-ಒಕ್ಕೂಟದ ಕಾರ್ಯಾಧ್ಯಕ್ಷರಾದ ಶ್ರೀಯುತ ಶ್ರೀಧರ ಕಿಳ್ಳಿಕೇತರವರು ಸ್ವಾಗತಿಸಿದರು ಪ್ರಶಿಕ್ಷಣಾರ್ಥಿಯಾದ ಶ್ರೀಮತಿ ಸುಪ್ರೀಯಾ ಡಮ್ಮಣಿಗಿರವರು ನಿರೂಪಿಸಿದರು ಕು. ದೀಪಾ ಟನಕಲ್ ರವರು ವಂದಿಸಿದರು. ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.