ಬೆಳಗಾವಿ ನಗರದ ಪ್ರತಿಷ್ಠಿತ ಕೆ.ಎಲ್.ಇ ಸಂಸ್ಥೆಯ ರಾಜಾ ಲಖಮಗೌಡ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಅಗ್ರ ಸ್ಥಾನದಲ್ಲಿ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಮತ್ತು ಸೆಂಟ್ ಜೋಸೆಫ್ ಪದವಿಪೂರ್ವ ಮಹಾವಿದ್ಯಾಲಯ ಕ್ಯಾಂಪ್ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ೨೦೨೪-೨೫ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಮಹಾವಿದ್ಯಾಲಯದ ೦೪ ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದುಕೊಂಡು ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ತಂಡದಲ್ಲಿ ರಝೀನ ಅಹ್ಮದ ಜಮಾದಾರ ೬೯ – ೭೫ ಕೆಜಿ ವಿಭಾಗ, ಮಂಥನ ಫಗರೆ ೬೪ – ೬೯ ಕೆಜಿ ವಿಭಾಗ, ಋತ್ವಿಕ್ ರಾವ್ ೯೧ – ೧೦೪ ಕೆಜಿ ವಿಭಾಗ, ಜ್ಞಾನೇಶ್ವರಿ ಧುಡುಂ ೫೪ -೫೭ ಕೆಜಿ ವಿಭಾಗಗಳಲ್ಲಿ ವಿನ್ರ‍್ಸ್ ಸ್ಥಾನ ಗಳಿಸಿ ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಭಾಗವಹಿಸಲಿದ್ದಾರೆ.ವೈಷ್ಣವಿ ಲೋಹಾರ ವಿದ್ಯಾರ್ಥಿನಿಯು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಜತ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಹಾಗೂ ಸರ್ವಸದಸ್ಯರು, ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರು ಹಾಗೂ ಸದಸ್ಯರು, ಕೆಎಲ್‌ಇ ಸಂಸ್ಥೆಯ ಆಜೀವ ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯರು, ಉಪಪ್ರಾಚಾರ್ಯರು ಹಾಗೂ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಭಾವಚಿತ್ರದಲ್ಲಿ : ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಬಾಸ್ಕೆಟ್ ಬಾಲ್ ಕ್ರೀಡಾಪಟುಗಳೊಂದಿಗೆ ಆರ್ ಎಲ್ ಎಸ್ ಪಿಯು ಮಹಾವಿದ್ಯಾಲಯದ ಪ್ರಾಚಾರ್ಯರು, ಉಪ ಪ್ರಾಚಾರ್ಯರು ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದಾರೆ.