ಹುಕ್ಕೇರಿ: ತಾಲೂಕಿನ ಬೆಲ್ಲದ ಬಾಗೇವಾಡಿಯ ವಿಶ್ವನಾಥ ಮ. ಕತ್ತಿ ಪ್ರಥಮ ದರ್ಜೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಹೊಂಬೆಳಕು-೨೦೨೪ ಸಾಂಸ್ಕೃತಿಕ, ಕ್ರೀಡಾ ಮತ್ತು ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ಬಿಎ, ಬಿಕಾಂ ಮತ್ತು ಬಿಎಸ್ಸಿ ವಿದ್ಯಾರ್ಥಿಗಳ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹಾವೀರ ಪಾಟೀಲ ಸಾಹಿತಿಗಳು, ರಾಯಭಾಗ ಅವರು ಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದು ಹೇಳಿದರು. ಮನಸ್ಸಿನ ಆಕರ್ಷಕನೆಗಳು ತಾತ್ಕಾಲಿಕವಾಗಿದ್ದು, ಅವುಗಳ ಹಿಂದೆ ಹೊಂದವರು ಜೀವನದಲ್ಲಿ ನೊಂದಿರುವ ನಿದರ್ಶನಗಳು ಹೆಚ್ಚಾಗಿವೆ. ಕಾಲೇಜಿನಲ್ಲಿ ಉತ್ತಮ ಸ್ನೇಹ ಗಳಸಿಕೊಂಡು ಶೈಕ್ಷಣಿಕ ಪ್ರಗತಿಯ ಜೊತೆಗೆ ತಂದೆ, ತಾಯಿ ಮತ್ತು ಗುರು ಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ರೂಪಿಸಿಕೊಳ್ಳಬೇಕು ಎಂದರು.
ನಂತರ ಸಮಾರಂಭದ ಅಧ್ಯಕ್ಷರಾದ ಶ್ರೀ ಮಹಾಂತೇಶ್ವರ ವಿದ್ಯಾ ಟ್ರಸ್ಟ್ನ ಮಾರ್ಗದರ್ಶಕರಾದ ಪವನ ಕತ್ತಿ ಅವರು ಮಾತನಾಡಿ, ವಿದ್ಯಾರ್ಥಿಗಳು ಮಹಾವಿದ್ಯಾಲಯದಲ್ಲಿ ವರ್ಷ ಪೂರ್ತಿ ನಡೆಯುವ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲಗೊಂಡು ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳಬೇಕು ಮತ್ತು ಮಹಾವಿದ್ಯಾಲಯ ತಮ್ಮ ನಿಜ ಪ್ರತಿಭೆಯನ್ನು ಪೋಷಿಸಿ ಬೆಳಸುತ್ತದ್ದೆ. ಪಠ್ಯಗಳ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ವಿದ್ಯಾರ್ಥಿಗಳು ಸರ್ವಾಂಗೀಣ ಅಭಿವೃದ್ಧಿ ಹೊಂದುವುದರ ಜೊತೆಗೆ ಮಹಾವಿದ್ಯಾಲಯದ ಮತ್ತು ತಮ್ಮ ತಂದೆ, ತಾಯಿಗೆ ಶ್ರೇಯಸ್ಸು ತರಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರಿ ಕೆ. ಸಿ. ಮುಚಖಂಡಿ, ಎಸ್. ಎಮ್. ಭಂಗಿ, ವ್ಹಿ. ಡಿ. ತೋರೋ, ವ್ಹಿ. ಬಿ. ಕಮತಿ, ಎಸ್.ಡಿ. ಬೆಳ್ಳಿಕಟ್ಟಿ, ಎನ್. ಎಸ್ ಪತ್ತಾರ ಡಾ. ಯು.ಕೆ. ಪಾಟೀಲ, ಜೀವನ ಹೊಸಮಣಿ, ಆರ್. ಎಸ್. ಹುದ್ದಾರ್ ಹಾಗೂ ಪದವಿ ಮಹಾವಿದ್ಯಾಲಯದ ಎಲ್ಲ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಕು. ಹರ್ಷಾ ಕಳ್ಳಿಮನಿ ಸ್ವಾಗತಿಸಿದರು, ಕು. ಗೀತಾ ಹಾಗೂ ರಾಣಿ ನಿರೂಪಿಸಿ, ಸಹನಾ ವಂದಿಸಿದರು.