ಬೆಳಗಾವಿ: ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಆರ್.ಎ. ಪರ್ವತೆ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಇತ್ತೀಚೆಗೆ ಅದ್ದೂರಿಯಾಗಿ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಎಸ್.ಎಲ್.ವಿ.ಕೆ ಪ್ರೌಢಶಾಲೆ, ಅಗಸಗಿ, ದೈಹಿಕ ಶಿಕ್ಷಕರಾದ ನಿಂಗನಗೌಡ ಪಾಟೀಲ್ ಅವರು ಆಗಮಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇವಲ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಯೋಗ ಮತ್ತು ಕ್ರೀಡೆಗಳ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯಗಳ ಅವಶ್ಯಕತೆಯನ್ನು ಒತ್ತಿ ಹೇಳಿದ ಅವರು, ಉತ್ತಮ ಜೀವನ ರೂಪಿಸಿಕೊಳ್ಳಲು ಕೌಶಲ್ಯಗಳು ಹೇಗೆ ಸಹಕಾರಿ ಎಂಬುದರ ಕುರಿತು ಬೆಳಕು ಚೆಲ್ಲಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ನಾಗನಗೌಡ ಪಾಟೀಲ್ ಅವರು ವಹಿಸಿದ್ದರು. ಬೋಧಕ ಸಿಬ್ಬಂದಿ ವರ್ಗದವರಾದ ನಮ್ರತಾ ಶಂಕರಗೌಡ, ಶೈಲಾ ಕಡಕಭಾವಿ, ಬಾಬು ಗಡದ್, ಕೃಷ್ಣ ಟೊಪಾಯಿ, ಆರತಿ ಅಕ್ಕನವರ್, ಐಶ್ವರ್ಯ ಬಡಿಗೇರ್, ನಿತಾ ಅವರು ಉಪಸ್ಥಿತರಿದ್ದರು. ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಹ ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ದೀಪಾ ತುಬಾಕಿ ಅಚ್ಚುಕಟ್ಟಾಗಿ ನೆರವೇರಿಸಿದರು. ಕುಮಾರ್ ದೃಶ್ಯ ಕರಲಿಂಗನವರ್ ಸ್ವಾಗತ ಭಾಷಣ ಮಾಡಿದರು. ಕೊನೆಯಲ್ಲಿ, ಗಣೇಶ್ ಮುದ್ದೇನವರ ವಂದನಾರ್ಪಣೆ ಮಾಡಿದರು.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143